Wednesday, April 10, 2024

ಬೆಳ್ತಂಗಡಿ: ತಾಲೂಕಿನ ಸೋಂಕಿತ ವ್ಯಕ್ತಿಗಳಿಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ರಾಜ್ಯದಲ್ಲೇ ಮೊದಲ ಪ್ರಯೋಗ ಒಂದು ಪ್ರಾರಂಭವಾಗಿದೆ.  ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೋಂಕಿತ ವ್ಯಕ್ತಿಗಳಿಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಮಾಡುವ ಮೂಲಕ ಗ್ರಾಮೀಣ ಭಾಗಕ್ಕೆ ಸೋಂಕು ಕಾಲಿಡದಂತೆ ನಿಗಾ ವಹಿಸಲಾಗಿದೆ. ನಗರ ಭಾಗದಲ್ಲಿ ವೇಗವಾಗಿ ಮುನ್ನುಗ್ಗುತ್ತಿರುವ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗಕ್ಕೂ ಕಾಲಿಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಗ್ರಾಮೀಣ ಭಾಗಕ್ಕೆ ಸೋಂಕು ಕಾಲಿಡದಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.
ಇದೀಗ ರಾಜ್ಯದಲ್ಲೇ ಪ್ರಥಮ ಪ್ರಯತ್ನ ಎಂಬಂತೆ ತಾಲೂಕಿನಲ್ಲಿ ಸೋಂಕಿತ ವ್ಯಕ್ತಿಗಳಿಗೆ ಪ್ರತ್ಯೇಕ ಕ್ವಾರಂಟೈನ್ ನಿಗಾ ವ್ಯವಸ್ಥೆಯನ್ನು ಮಾಡಲಾಗಿದೆ. ಗುಣ ಲಕ್ಷಣಗಳಿಲ್ಲದೇ ಆರೋಗ್ಯವಾಗಿರುವ ಸೋಂಕಿತರಿಗೆ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಪಡಿಸಬೇಕೆಂದು ಸರ್ಕಾರ ಆದೇಶಿಸಿದೆ. ಆದರೆ ಗ್ರಾಮೀಣ ಭಾಗದಲ್ಲಿ ಒಂದೇ ಮನೆಯಲ್ಲಿ ಕೂಡು ಕುಟುಂಬವಿರುವ ಪದ್ದತಿಯಲ್ಲಿ ಒಂದೇ ಶೌಚಾಲಯ ಇರುತ್ತವೆ. ಇದರಿಂದಾಗಿ ಸೋಂಕು ಮನೆಮಂದಿಗೆಲ್ಲಾ ಹರಡಿ, ಪೂರ್ತಿ ಹಳ್ಳಿಗೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಈ ರೀತಿಯ ಸೋಂಕಿತರಿಗೆ ಸುಸ್ಸಜ್ಜಿತ ಆಸ್ಪತ್ರೆಯ ವ್ಯವಸ್ಥೆಯನ್ನು ಮಾಡಲಾಗಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ ಅವರ ಸಹಕಾರದೊಂದಿಗೆ ಧರ್ಮಸ್ಥಳದ ಲೈಲಾ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಳೇ ಕ್ಷಯ ರೋಗ ಆಸ್ಪತ್ರೆಯನ್ನು ಇದಕ್ಕಾಗಿ ಮೀಸಲಿಡಲಾಗಿದೆ. ಇಲ್ಲಿ 150 ಹಾಸಿಗೆ ಸಹಿತ ಉಟೋಪಚಾರ, ಪ್ರತ್ಯೇಕ ಶೌಚಾಲಯ, ಸ್ನಾನ ಗೃಹ, ಮಹಿಳೆಯರಿಗೂ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ.
ಉಟೋಪಚಾರದ ಸಂಪೂರ್ಣ ವ್ಯವಸ್ಥೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದಲೇ ಮಾಡಲಾಗುತ್ತಿದೆ. ಈಗಾಗಲೇ ಆರು ಮಂದಿ ಆರೋಗ್ಯವಂತ ಸೋಂಕಿತರನ್ನು ಬೆಳ್ತಂಗಡಿ ಸರಕಾರಿ ಕೋವಿಡ್ ಆಸ್ಪತ್ರೆಯಿಂದ ಈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇಲ್ಲಿ ನುರಿತ ವೈದ್ಯರಿಂದ ಮಾನಸಿಕ ಸ್ಥೈರ್ಯ ತುಂಬಿ ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಆರೋಗ್ಯ ಕ್ರಮಗಳನ್ನು ಸೂಚಿಸಲಾಗುತ್ತಿದೆ. 10 ದಿನಗಳ ಬಳಿಕ ಶಾಸಕ ಹರೀಶ್ ಪೂಂಜಾ ಅವರ ಸ್ವಂತ ಖರ್ಚಿನಿಂದ ಸೋಂಕಿತರ ಕೋವಿಡ್ ಟೆಸ್ಟ್ ನಡೆಸಿ ನೆಗೆಟಿವ್ ವರದಿ ಬಂದ ಬಳಿಕ ಕ್ವಾರಂಟೈನ್ ಮುಕ್ತಾಯ ಮಾಡಲಾಗುತ್ತದೆ. ಒಟ್ಟಿನಲ್ಲಿ ಕೊರೋನಾದ ಈ ಸಂಕಷ್ಟದ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಈ ರೀತಿಯ ಕ್ರಮಗಳನ್ನು ಕೈಗೊಂಡಿರುವುದು ಜನ ಮೆಚ್ಚುವಂತಹ ಕೆಲಸವಾಗಿದೆ.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...