Saturday, April 6, 2024

ದ. ಕ. ಜಿಲ್ಲೆಯಲ್ಲಿ ಇಂದು 119 ಹೊಸ ಕೋವಿಡ್ ಕೇಸ್ ಪತ್ತೆ : 8 ಮಂದಿ ಸಾವು

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 119 ಹೊಸ ಕೊರೋನ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4930ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಪತ್ತೆಯಾದ 119 ಸೋಂಕಿತರ ಪೈಕಿ 46 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 34 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 6 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 33 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಜಿಲ್ಲೆಯಲ್ಲಿ 2502 ಸಕ್ರೀಯ ಪ್ರಕರಣಗಳಿದ್ದು, ಇಂದು 80 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ 2297 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಇಂದು ಜಿಲ್ಲೆಯಲ್ಲಿ 65, 92 ವರ್ಷದ ಮಹಿಳೆಯರು ಹಾಗೂ 68, 64, 65, 82, 65, 51 ವರ್ಷದ ಪುರುಷರು ಸಹಿತ ಒಟ್ಟು 8 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 131 ಮಂದಿ ಸೋಂಕಿತರು ಮೃತಪಟ್ಟ ಬಗ್ಗೆ ವರದಿಯಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...