Wednesday, April 17, 2024

ದ. ಕ. ಜಿಲ್ಲೆಯಲ್ಲಿ ಇಂದು ಒಂದೇ ದಿನ 238 ಹೊಸ ಕೊರೋನಾ ಕೇಸ್ ಪತ್ತೆ: 6 ಸೋಂಕಿತರ ಸಾವು

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಒಂದೇ ದಿನ 238 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2763 ಕ್ಕೆ ಏರಿಕೆಯಾಗಿದೆ.

106 ಮಂದಿಯಲ್ಲಿ ಐಎಲ್ಐ ಪ್ರಕರಣ ಪತ್ತೆಯಾಗಿದ್ದು, 73 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ. ಉಳಿದಂತೆ ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ವಿದೇಶದಿಂದ ಬಂದ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 17 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇಂದು 74 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1163 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

1537 ಸಕ್ರೀಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಮುಲ್ಕಿ ನಿವಾಸಿ 44 ವರ್ಷದ ವ್ಯಕ್ತಿ, ಬೆಳಗಾವಿಯ ರಾಮದುರ್ಗ ನಿವಾಸಿ 68 ವರ್ಷದ ವ್ಯಕ್ತಿ, ಮಂಗಳೂರಿನ 62 ವರ್ಷದ ವ್ಯಕ್ತಿ, ಮಂಗಳೂರಿನ 66 ವರ್ಷದ ವ್ಯಕ್ತಿ, ಬಂಟ್ವಾಳ ದ 47 ವರ್ಷದ ಮಹಿಳೆ ಹಾಗೂ ಮಂಗಳೂರಿನ 76 ವರ್ಷದ ಮಹಿಳೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಮೃತರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಲ್ಲಾ ಆರು ಮಂದಿ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟವರಾಗಿದ್ದಾರೆ ಎಂಬ ಮಾಹಿತಿ ಇದೆ.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.