Wednesday, April 10, 2024

ಕರ್ನಾಟಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ದ.ಕ. ಜಿಲ್ಲೆಗೆ ಎರಡನೇ ಸ್ಥಾನ

ಮಂಗಳೂರು: ಕರ್ನಾಟಕ ರಾಜ್ಯದ ಜಿಲ್ಲೆವಾರು ಸೋಂಕಿತರ ಪಟ್ಟಿಯಲ್ಲಿ ಈಗಾಗಲೇ ಬೆಂಗಳೂರು ಮೊದಲನೇ ಸ್ಥಾನದಲ್ಲಿದ್ದು ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿ ಇದೆ ಎಂದು  ವರದಿ ತಿಳಿಸಿದೆ.

ಈ ವರದಿಯ ಪ್ರಕಾರ ಬೆಂಗಳೂರಿನಲ್ಲಿ ಈವರೆಗೆ 34,743 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಬಳಿಕ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆಯವರೆಗೆ 3829 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ 26,746 ಸಕ್ರಿಯ ಪ್ರಕರಣಗಳಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 2574 ಕೊರೊನಾ ಸೋಂಕು ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 720 ಮಂದಿ ಕೊರೊನಾಗೆ ಬಲಿಯಾಗಿದ್ದು, ದ.ಕ. ಜಿಲ್ಲೆಯಲ್ಲಿ 73 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ನಾಳೆಯಿಂದ ಜಿಲ್ಲೆಯಲ್ಲಿ ಲಾಕ್‌ಡೌನ್‌ ತೆರವಾಗಲಿದ್ದು,  ಉದ್ಯೋಗಗಳು ಪುನರ್‌ ಆರಂಭವಾಗಲಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ತಮ್ಮ ತಮ್ಮ  ಜಾಗಾರೂಕತೆಯನ್ನು ತಾವು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ನಾವು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್‌ ಧರಿಸಿ ನಮ್ಮ ರಕ್ಷಣೆಯನ್ನು ನಾವು ಮಾಡಿಕೊಳ್ಳಬೇಕಾಗಿದೆ.

ಜಿಲ್ಲೆಯು ಪ್ರಸ್ತುತ ಪಾಸಿಟಿವ್‌ ಪ್ರಕರಣ ಹಾಗೂ ಮರಣ ಸಂಖ್ಯೆಯಲ್ಲಿ ರಾಜ್ಯವಾರು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ನಾಗರಿಕರು ಯಾವುದೇ ಭಯ ಪಡುವ ಅಗತ್ಯವಿಲ್ಲ, ಆದರೆ ಜಾಗಾರೂಕರಾಗಿರುವುದು ಅತ್ಯಗತ್ಯವಾಗಿದೆ.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...