Friday, April 5, 2024

ಮಂಗಳೂರು: ಇಬ್ಬರು ಪತ್ರಕರ್ತರಲ್ಲಿ ಕೊರೊನಾ ಸೋಂಕು ದೃಢ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಈಗ ಪತ್ರಕರ್ತರಿಗೂ ಕೊರೋನಾ ಸೋಂಕು. ಇಂದು ಮಂಗಳೂರಿನಲ್ಲಿ ಇಬ್ಬರು ಪತ್ರಕರ್ತರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ರಾಷ್ಟ್ರೀಯ ಮಾಧ್ಯಮದ ಪ್ರತಿನಿಧಿಗಳಾಗಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರಿಬ್ಬರೂ ಕೂಡಾ ಮಂಗಳೂರಿನಲ್ಲಿ ಎಲ್ಲಾ ಪತ್ರಕರ್ತರಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಪರೀಕ್ಷಿಸಲಾಗಿದ್ದು, ಆ ಸಂದರ್ಭ ವರದಿ ನೆಗೆಟಿವ್‌ ಬಂದಿತ್ತು. ಆದರೆ ಇತ್ತೀಚೆಗೆ ಇಬ್ಬರಿಗೂ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಮತ್ತೊಮ್ಮೆ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಪ್ರಸ್ತುತ ಇಬ್ಬರು ಕೂಡಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
”ಇನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದ್ದು, ನಾವೆಲ್ಲರೂ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಕರ್ತವ್ಯ ನಿರ್ವಹಿಸಬೇಕು. ಕೋವಿಡ್ ಬಗ್ಗೆ ಯಾರೂ ಆತಂಕ ಪಡುವುದು ಬೇಡ, ಆದರೆ ಮುಂಜಾಗ್ರತೆ, ಸುರಕ್ಷತೆ ಅಗತ್ಯ” ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಶ್ರೀನಿವಾಸ್ ನಾಯಕ್ ತಿಳಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...