Friday, April 5, 2024

ಅಡ್ಯಾರ್‌ ಹತ್ಯೆ, ಬಜಿಲಕೇರಿ ಹಲ್ಲೆ ಪ್ರಕರಣದ ಆರೋಪಿಗಳಿಗೂ ಕೊರೊನಾ ಪಾಸಿಟಿವ್ ಪತ್ತೆ

ಮಂಗಳೂರು: ಅಡ್ಯಾರ್ ಗ್ರಾ.ಪಂ. ಸದಸ್ಯನ ಹತ್ಯೆ ಪ್ರಕರಣದ  ಮೂವರು ಆರೋಪಿಗಳು ಹಾಗೂ ಬಜಿಲಕೇರಿಯಲ್ಲಿ ತಲವಾರ್‌ ದಾಳಿ ನಡೆಸಿದ ಪ್ರಕರಣದ ಎಂಟು ಮಂದಿ ಆರೋಪಿಗಳ ಪೈಕಿ 6 ಆರೋಪಿಗಳಿಗೆ ಕೊರೊನಾ ಪಾಸಿಟಿವ್‌ ಆಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಬಂದರು ಪೊಲೀಸ್ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ನಗರದ ಹೊರ ವಲಯದ ಅಡ್ಯಾರ್‌ನಲ್ಲಿ ಗ್ರಾ.ಪಂ. ಸದಸ್ಯ ಅಡ್ಯಾರ್ ಪದವು ನಿವಾಸಿ ಯಾಕೂಬ್ (46) ಎಂಬವರನ್ನು ನಾಲ್ವರು ಸೇರಿ ಹತ್ಯೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಗೆ ವಿಧಿಸಿ ನಿಯಮ ಪ್ರಕಾರವಾಗಿ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ನಿನ್ನೆ ಬಂದ ವರದಿಯಲ್ಲಿ ಈ ಮೂವರು ಆರೋಪಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂವರಿಗೆ ಸೋಂಕು ದೃಢಪಟ್ಟ ಹಿನ್ನಲೆ ಆರೋಪಿಗಳನ್ನು ಬಂಧಿಸಿದ ಪೊಲೀಸ್‌ ಇನ್‌ಸ್ಟೆಕ್ಟರ್‌ ಹಾಗೂ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಇನ್ನೊಂದು ಪ್ರಕರಣ ನಗರದ ಬಜಿಲಕೆರೆಯಲ್ಲಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಒಂದು ತಂಡದ 8 ಮಂದಿ ಆರೋಪಿಗಳ ಪೈಕಿ ಆರು ಜನರಿಗೆ ಸೋಂಕು ಪಾಸಿಟಿವ್‌ ಆಗಿದೆ. ಬಜಿಲಕೆರೆಯಲ್ಲಿ ಎರಡು ತಂಡಗಳ ನಡುವೆ ಘರ್ಷನೆ ನಡೆದು ತಲವಾರ್‌ ದಾಳಿಯಾದ ಪ್ರಕರಣಕ್ಕೆ ಸಂಬಂಧಿಸಿ ಒಂದು ತಂಡದ 8 ಮಂದಿ ಮತ್ತು ಇನ್ನೊಂದು ತಂಡದ 4 ಮಂದಿಯನ್ನು ಬಂಧಿಸಲಾಗಿತ್ತು. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿಗಳಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಆರು ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

ಈ ಎರಡು ಪ್ರಕರಣದ ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಇರಿಸಿದ ಕಾರಣದಿಂದಾಗಿ ಎರಡು ಠಾಣೆಗಳನ್ನು ಎರಡು ದಿನಗಳ ಕಾಲ ಸೀಲ್‌ಡೌನ್‌ ಮಾಡಿ ಸ್ಯಾನಿಟೈಝೇಷನ್‌ಗೆ ಸೂಚಿಸಲಾಗಿದೆ. ಹಾಗೆಯೇ ಪೊಲೀಸರ ಗಂಟಲ ದ್ರವದ ಮಾದರಿಯನ್ನು ಕೂಡಾ ಪರೀಕ್ಷೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಇದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...