Friday, April 12, 2024

ರಾಜ್ಯದಲ್ಲಿ ಕೊರೊನಾ ಪರೀಕ್ಷೆ ಹೆಚ್ಚಳಕ್ಕೆ ಹೊಸದಾ‌ಗಿ 20 ಲ್ಯಾಬ್: ಸಚಿವ ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಲು ಮತ್ತೆ ಹೊಸದಾಗಿ 20 ಲ್ಯಾಬ್ ಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ. ಪ್ರಸ್ತುತ 85 ಲ್ಯಾಬ್‌ಗಳಿದ್ದು, ಒಂದು ದಿನಕ್ಕೆ 35 ಸಾವಿರ ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲೇ ವಾರ್ಡ್ ಬೂತ್‌ ಮಟ್ಟದಲ್ಲಿ ಸಿಬ್ಬಂದಿ ಮನೆ ಮನೆಗೆ ತೆರಳಿ ಪರೀಕ್ಷೆ ನಡೆಸುತ್ತಿದ್ದು, ಇದರಿಂದಾಗಿ ಸೋಂಕು ಪತ್ತೆ ಸುಲಭವಾಗುತ್ತದೆ ಎಂದು ಹೇಳಿದರು.

ಹಾಗೆಯೇ ಈ ಸಂದರ್ಭದಲ್ಲೇ ಕೊರೊನಾ ಸಮುದಾಯ ಹಂತಕ್ಕೆ ಹರಡಿದೆ ಎಂಬುದನ್ನು ಅಲ್ಲಗಳೆದ ಅವರು ಶೇ. 95 ರಷ್ಟು ರೋಗಿಗಳಿಗೆ ಲಕ್ಷಣ ಇಲ್ಲದವರಾಗಿದ್ದು, ರೋಗ ಲಕ್ಷಣ ಇದ್ದವರು ಮನೆಯಲ್ಲೇ ಪ್ರತ್ಯೇಕವಾಗಿ ಇರಲು ಪ್ರೋತ್ಸಾಹಿಸಬೇಕಾಗಿದೆ ಎಂದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...