Wednesday, April 10, 2024

ಚಾಲಕನಿಂದ ಪೊಲೀಸರ ಮೇಲೆ ಹಲ್ಲೆ, ಕೊಲೆ ಬೆದರಿಕೆ

ಬಂಟ್ವಾಳ: ಪೋಲೀಸರ ಮೇಲೆ ಹಲ್ಲೆ ನಡೆಸಿ ಬಳಿಕ ಕೊಲೆ ಬೆದರಿಕೆ ಹಾಕಿದ ಘಟನೆ ಬುಧವಾರ ರಾತ್ರಿ ಮೆಲ್ಕಾರ್ ಎಂಬಲ್ಲಿ ನಡೆದಿದೆ.
ಗೋಳ್ತಮಜಲು ನಿವಾಸಿ ಲಾರಿ ಚಾಲಕ ಅಬ್ದುಲ್ ಸಲಾಂ ಎಂಬಾತ ಆರೋಪಿಯಾಗಿದ್ದು ಈತ ಪೋಲೀಸರ ಮೇಲೆ ರಾಡ್ ನಿಂದ ಹಲ್ಲೆ ನಡೆಸಿ, ಪೋಲೀಸ್ ವಾಹನವನ್ನು ರಾಡ್ ನಿಂದ ಹೊಡೆದು ಪುಡಿ ಮಾಡಿದ್ದಲ್ಲದೆ ಪೋಲೀಸರಿಗೆ ಕೊಲೆ ಬೆದರಿಕೆಯನ್ನು ಹಾಕಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ಎ.ಎಸ್.ಐ. ಶೈಲೇಶ್ ಹಾಗೂ ಸಿಬ್ಬಂದಿಗಳಾದ ದೇವಪ್ಪ, ಮಲ್ಲಕ್ ಸಾಬ್ ಹಾಗೂ ಚಾಲಕ ನಿರಂಜನ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ವಿವರ:
ಮೆಲ್ಕಾರ್ ಜಂಕ್ಷನ್ ನಲ್ಲಿ ಬುಧವಾರ ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಸಾರ್ವಜನಿಕರಿಗೆ ಹಾಗೂ ಚಾಲಕ ಅಬ್ದುಲ್ ಸಲಾಂ ಅವರ ಮಧ್ಯೆ ಗಲಾಟೆ ನಡೆಯುತ್ತಿದ್ದು, ಆ ಸಮಯಕ್ಕೆ ಬಂಟ್ವಾಳ ನಗರ ಠಾಣಾ ಎ.ಎಸ್. ಐ ಶೈಲೇಶ್ ಮತ್ತು ಮೂವರು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು.
ಅ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಗಲಾಟೆ ನಿಲ್ಲಿಸಲು ಮುಂದಾದ ವೇಳೆ ಪೋಲೀಸರ ಮೇಲೆ ಆರೋಪಿ ಅಬ್ದುಲ್ ಸಲಾಂ ಅವರು ರಾಡ್ ನಿಂದ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ ಜೊತೆಗೆ ಪೋಲೀಸ್ ಜೀಪ್ ಗೂ ರಾಡ್ ನಿಂದ ಹೊಡೆದು ಪುಡಿ ಮಾಡಿದ್ದಾನೆ ಹಾಗೂ ಪೋಲೀಸರನ್ನು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಪೋಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯ ಮೇಲೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಲ್ಲೆ ನಡೆಸಿದ್ದು ಗಾಯಗಳಾಗಿವೆ.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...