Thursday, April 18, 2024

ಫರಂಗಿಪೇಟೆ ಮಸೀದಿ ಅಧ್ಯಕ್ಷ ಬಾವ ನಿಧನ

ಬಂಟ್ವಾಳ: ಪುದು ಗ್ರಾಮದ ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ, ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಮುಹಮ್ಮದ್ ಬಾವ (72) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷರಾಗಿ 25ಕ್ಕೂ ಅಧಿಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದರು.

ಕಿದ್ಮತ್ತುಲ್ ಇಸ್ಲಾಮ್ ಅಸೋಸಿಯೇಷನ್ ಫರಂಗಿಪೇಟೆ ಇದರ ಮುಂದಾಳತ್ವ ವಹಿಸಿದ್ದ ಮುಹಮ್ಮದ್ ಬಾವಾ ಅವರು ಈ ಸಂಘಟನೆಯ ಮೂಲಕ ಪ್ರತೀ ವರ್ಷ 10 ಜೋಡಿ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ‌.

ಸರ್ವ ಧರ್ಮಿಯರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದ ಮೃತರು, ಫರಂಗಿಪೇಟೆ ಜಮಾಅತ್ ನಲ್ಲಿ ನಡೆಯುವ ಎಲ್ಲಾ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಪುದು ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷರಾಗಿ ನಿರಂತರ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದ ಮುಹಮ್ಮದ್ ಭಾವ ಅವರ ನಿಧನಕ್ಕೆ ಮಸೀದಿಯ ಉಪಾಧ್ಯಕ್ಷರೂ ಆದ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಕುಂಪನಮಜಲು, ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುನೀಶ್ ಅಲಿ ಸಂತಾಪ ವ್ಯಕ್ತಪಡಿಸಿದ್ದು ಮುಹಮ್ಮದ್ ಬಾವ ಅವರ ನಿಧನ ಫರಂಗಿಪೇಟೆ ಜಮಾಅತ್ ಗೆ ತುಂಬಿಸಲಾರದ ನಷ್ಟವಾಗಿದೆ ಎಂದಿದ್ದಾರೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...