Sunday, April 7, 2024

ದ.ಕ. ಜಿಲ್ಲೆ : ಖಾಸಗಿ ಆಸ್ಪತ್ರೆಗಳಲ್ಲಿ ‘ಆರೋಗ್ಯಮಿತ್ರ’ರ ಸಹಾಯದಿಂದ ಉಚಿತ ಚಿಕಿತ್ಸೆ ಪಡೆಯಿರಿ

ಮಂಗಳೂರು: ದ.ಕ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯಡಿಯಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ ಪಡೆಯಲು ಜನರಿಗೆ ಸುಲಭವಾಗುವ ಸಲುವಾಗಿ ಜಿಲ್ಲೆಯ 9 ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಎಪಿಎಲ್‌ ಅಥವಾ ಬಿಪಿಎಲ್‌ ಆಗಲಿ ಯಾವುದೇ ಪಡಿತರ ಚೀಟಿ ಹೊಂದಿದ್ದರೂ ಕೂಡಾ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯಡಿಯಲ್ಲಿ ಎಲ್ಲರೂ ಕೊರೊನಾಗೆ ಉಚಿತ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದ್ದರು.

ಆದರೆ ಆ ಬಳಿಕ ಕೂಡಾ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಹಲವು ದೂರುಗಳು ಕೇಳಿ ಬಂದ ಕಾರಣದಿಂದಾಗಿ ಜಿಲ್ಲೆಯ 8 ಮೆಡಿಕಲ್‌ ಕಾಲೇಜು ಮತ್ತು ಒಂದು ಆಸ್ಪತ್ರೆ ಸೇರಿದಂತೆ 9 ಆಸ್ಪತ್ರೆಗಳಲ್ಲಿ ಪ್ರತಿ ಆಸ್ಪತ್ರೆಯಲ್ಲಿ ಇಬ್ಬರು ಆರೋಗ್ಯ ಮಿತ್ರರನ್ನು ನೇಮಕ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ನೇಮಿಸಲಾಗಿರುವ ಈ ಆರೋಗ್ಯ ಮಿತ್ರರು ಸರಕಾರದ ಪ್ರತಿನಿಧಿಗಳಾಗಿ ಉಚಿತ ಚಿಕಿತ್ಸೆ ಪಡೆಯಲು ಜನರಿಗೆ ನೆರವಾಗಲಿದ್ದಾರೆ.

ಇನ್ನು ಕೊರೊನಾ ಸೋಂಕು ಲಕ್ಷಣಗಳು ಇರುವ ರೋಗಿಗಳು ವೆನ್ಲಾಕ್‌ ಆಸ್ಪತ್ರೆಯಿಂದ ಶಿಫಾರಸು ಪತ್ರ ಪಡೆದು ಖಾಸಗಿ ಆಸ್ಪತ್ರೆಗಳಿಗೆ ಹೋಗಬೇಕು. ಒಂದು ವೇಳೆ ತುರ್ತು ಸಂದರ್ಭವಾಗಿದ್ದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ರೋಗಿಯ ಕಾಯಿಲೆಗೆ ಸಂಬಂಧಿಸಿ ಆಸ್ಪತ್ರೆಯವರು ವೆನ್ಲಾಕ್‌ಗೆ ರಿಕ್ವೆಸ್ಟ್‌ ಲೆಟರ್‌ ಕಳುಹಿಸಲಿದ್ದು, ಅದಕ್ಕೆ ಅಧಿಕಾರಿಗಳು ಅನುಮತಿ ನೀಡುತ್ತಾರೆ. ಈ ಪ್ರಕ್ರಿಯೆಗೆ ಜನರು ಆರೋಗ್ಯ ಮಿತ್ರರ ಸಹಾಯವನ್ನು ಪಡೆಯಬಹುದಾಗಿದ್ದು ಅವರನ್ನು ಸಂಪರ್ಕಿಸಲು ಮೊಬೈಲ್‌ ಸಂಖ್ಯೆಯನ್ನು ನೀಡಲಾಗಿದೆ.

ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆ 9737007132, ಶ್ರೀನಿವಾಸ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ, 9901244712, ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆ 9845403347, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ 9900095182, ಯೇನಪೋಯಾ ಮೆಡಿಕಲ್‌ ಕಾಲೇಜು ಆಸ್ಪತ್ರೆ 99017309949, ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ 9449937129, ಕೆವಿಜಿ ಮೆಡಿಕಲ್‌ ಕಾಲೇಜು ಹಾಗೂ ಆಸ್ಪತ್ರೆ 9480013503, ಜ| ಕೆ.ಎಸ್‌. ಹೆಗ್ಡೆ ಚಾರಿಟೆಬಲ್‌ ಆಸ್ಪತ್ರೆ 9740083240, ಕೆಎಂಸಿ ಆಸ್ಪತ್ರೆ ಅತ್ತಾವರ 9972388991 ಈ ಮೊಬೈಲ್‌ ಸಂಖ್ಯೆಯನ್ನು ಸಂಪರ್ಕಿಸಬಹುದು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...