Wednesday, April 17, 2024

ಕಟೀಲಿನ ಕೊಂಡೇಲದ ಕ್ಯಾನ್ಸರ್ ಸಂತ್ರಸ್ಥೆಯ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಬೆಳ್ತಂಗಡಿಯ ಖುಷಿ ಆಂಬ್ಯುಲೆನ್ಸ್ ಸಂಸ್ಥೆಯ ಮಾಲಿಕ

ಕಟೀಲು: ಇತ್ತೀಚಿಗೆ ಕಟೀಲಿನ ರಾಮ್ ಸೇನಾ ಕೇಸರಿ ಘಟಕದ ಕಾರ್ಯಕರ್ತರೊಬ್ಬರು ಕೊಂಡೇಲದ ಬಡ ಮಹಿಳೆಯೊಬ್ಬರ ಕರುಣಾಜನಕ ಪರಿಸ್ಥಿತಿಯ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

ಇದನ್ನು ಗಮನಿಸಿದ ಪಕ್ಕದ ತಾಲೂಕಿನ ಖುಷಿ ಆಂಬ್ಯುಲೆನ್ಸ್ ಸಂಸ್ಥೆಯ ಮಾಲಿಕ ಅಭಿಲಾಷ್ ಎಂ. ಬೆಳ್ತಂಗಡಿ ಇವರು ಸಂತ್ರಸ್ತೆಗೆ ಬೇಕಾದ ಆಂಬ್ಯುಲೆನ್ಸ್ ಸೇವೆಯನ್ನು ಆಜೀವ ಪರ್ಯಂತ ಉಚಿತವಾಗಿ ನೀಡುವುದಾಗಿ ಘೋಷಿಸಿ ಮಾನವೀಯತೆ ಮೆರೆದಿದ್ದಾರೆ.

ಮೂಡಬಿದ್ರೆಯಿಂದ ಮಂಗಳೂರಿಗೆ ವಾರಕ್ಕೊಂದು ಬಾರಿ ರೋಗಿಯು ಹೋಗಿ ಬರಬೇಕಾಗಿದ್ದು ದೂರದ ಊರಿನ ಆಂಬ್ಯುಲೆನ್ಸ್ ಸಂಸ್ಥೆಯೊಂದು ಇದರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಕೊರೋನದ ಕಾರಣ ನೀಡಿ ಸೇವೆ ನೀಡಲು ಹಿಂದೆ ಮುಂದೆ ನೋಡುವ ಆಂಬ್ಯುಲೆನ್ಸ್ ಡ್ರೈವರ್ ಗಳ ನಡುವೆ ಖುಷಿ ಆಂಬ್ಯುಲೆನ್ಸ್ ಸಂಸ್ಥೆಯ ಈ ನಡೆ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...