Sunday, April 7, 2024

ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಕಟ್ಟಡ ಅವೈಜ್ಞಾನಿಕ ಅಪಾಯಕಾರಿ ಕಾಮಗಾರಿ : ಶಂಕರ್ ಶೆಟ್ಟಿ ದೂರು

ಬಂಟ್ವಾಳ: ಅಮ್ಮುಂಜೆ ಗ್ರಾಮದ ಬೆಂಜನಪದವುನಲ್ಲಿ ನಿರ್ಮಾಣವಾಗುತ್ತಿರುವ ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಕಟ್ಟಡ ಕಾಮಗಾರಿ ಅಪಾಯಕಾರಿ ಗುಡ್ಡದ ಪಕ್ಕದಲ್ಲಿರುವ ಹಿನ್ನೆಲೆಯಲ್ಲಿ ಕಾರಣ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದ್ದು, ಆದರೆ ಕಾಮಗಾರಿ ಮಾತ್ರ ನಡೆಯುತ್ತಿದೆ ಎಂದು ಆರೋಪಿಸಿ ಬೆಂಜನಪದವು ಕದಂಬ ಮನೆ ನಿವಾಸಿ ಜಿ.ಶಂಕರ ಶೆಟ್ಟಿ ಅವರು ಬಂಟ್ವಾಳ ಶಾಸಕರು ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತನ್ನ ವರ್ಗ ಭೂಮಿ ಹಾಗೂ ಅದಕ್ಕೆ  ಸಂಬಂದಿಸಿದ ರಸ್ತೆಯನ್ನು ಅಗೆದು ನಿರ್ಮಿಸುತ್ತಿರುವ ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಕಾಮಗಾರಿಯು ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ತಾನು ಲೋಕೋಪಯೋಗಿ ಇಲಾಖೆಗೆ ಮಾಡಿದ ಮನವಿಯಂತೆ ಗುಡ್ಡವನ್ನು ಅಗೆದ ಕಾರಣ 10 ಮೀ. ಎತ್ತರದ ಗುಡ್ಡ ಕುಸಿಯುವ ಭೀತಿಯಲ್ಲಿದೆ ಎಂದು ಲೋಕೋಪಯೋಗಿ ಇಲಾಖೆಯು ಪತ್ರ ನೀಡಿದೆ.

ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಬಂಟ್ವಾಳ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಅವರು ಪರಿಶೀಲನೆ ನಡೆಸಿ ಗುಡ್ಡ ಕುಸಿಯುವ ಸ್ಥಿತಿಯಲ್ಲಿರುವ ಕುರಿತು ಮಂಗಳೂರು ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ವರದಿ ನೀಡಿದ್ದರು.
ಅದರಂತೆ ಅವರು, ಅಲ್ಪಸಂಖ್ಯಾತರ ಇಲಾಖೆಗೆ ಕೇಳಿದಾಗ ಕಾಮಗಾರಿ ಸ್ಥಗಿತಗೊಂಡಿರುವ ಮಾಹಿತಿ ನೀಡಿತ್ತು. ಆದರೂ ಪ್ರಸ್ತುತ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಪರಿಶೀಲನೆ ನಡೆಸುಂತೆ ಅವರು ಶಾಸಕರು ಹಾಗೂ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...