Wednesday, April 17, 2024

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಪತ್ನಿ,ಮಗಳಿಗೂ ಕೊರೊನಾ ಸೋಂಕು

ಹಾಸನ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿಯವರ ಪತ್ನಿ ಹಾಗೂ ಮಗಳಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ವಾರ ಎಚ್.ಕೆ.ಕುಮಾರಸ್ವಾಮಿ ಹಾಗೂ ಅವರ ಆಪ್ತ ಸಹಾಯಕ ಮತ್ತು ಗನ್ ಮ್ಯಾನ್ ಸೇರಿದಂತೆ ಒಟ್ಟು 11 ಜನರ ಗಂಟಲು ದ್ರವವನ್ನು ಟೆಸ್ಟಿಂಗ್ ಗೆ ಕಳುಹಿಸಲಾಗಿತ್ತು. ಅದರಲ್ಲಿ ಬೆಳಗೋಡು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆ ಚಂಚಲ ಕುಮಾರಸ್ವಾಮಿ, ಅವರ ಮಗಳು, ಹಾಗೂ ಡ್ರೈವರ್ ಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ.

ಸದ್ಯ ಚಂಚಲ ಕುಮಾರಸ್ವಾಮಿ ಅವರು ಮಗಳ ಮನೆಯಲ್ಲಿ ಹೋಂ ಐಸೋಲೇಷನ್ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನ ಚಾಲಕ ಹಾಸನ ಜಿಲ್ಲಾ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

More from the blog

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಬಂಟ್ವಾಳದ ಹಿಂದೂ ಯುವ ಸೇನಾ ಮುಖಂಡನಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂದಿಸಿ, ಕಠಿನ ಶಿಕ್ಷೆ ವಿಧಿಸುವಂತೆ ಹಿಂದೂ ಯುವ ಸೇನೆ ಆಗ್ರಹ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಪುಷ್ಪರಾಜ್ ರವರು ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾಗಿರುವುದನ್ನು ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಬಂಟ್ವಾಳ ತಾಲೂಕು ಘಟಕ ಖಂಡಿಸುತ್ತದೆ. ಅಮಾಯಕ ಪುಷ್ಪರಾಜ್...

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...