Tuesday, April 9, 2024

ಕಾರ್ಗಿಲ್ ವಿಜಯ ದಿವಸಕ್ಕೆ ಇಂದು 21ನೇ ವರ್ಷ – ವೀರ ಯೋಧರಿಗೆ ನಮನ

ನವದೆಹಲಿ:  ಕಾರ್ಗಿಲ್ ವಿಜಯ ದಿವಸಕ್ಕೆ ಜುಲೈ 26 ರ ಭಾನುವಾರ 21ನೇ ವರ್ಷವಾಗಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ವೀರ ಯೋಧರನ್ನು ನೆನೆಯುವ ದಿನವಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಗೃಹ ಸಚಿವ ಅಮಿತ್‌ ಶಾ ಅವರು, ”ಕಾರ್ಗಿಲ್ ವಿಜಯ ದಿನವು ಭಾರತದ ಸ್ವಾಭಿಮಾನ, ಅದ್ಭುತ ಶೌರ್ಯ ಮತ್ತು ಅಚಲ ನಾಯಕತ್ವದ ಸಂಕೇತವಾಗಿದೆ. ಈ ಯೋಧರಿಗೆ ನಾನು ನಮಸ್ಕರಿಸುತ್ತೇನೆ, ಅವರ ಅದಮ್ಯ ಧೈರ್ಯದಿಂದ, ಕಾರ್ಗಿಲ್‌ನಲ್ಲಿ ಅಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಮಾತೃಭೂಮಿಯನ್ನು ರಕ್ಷಿಸಲು ಮೀಸಲಾಗಿರುವ ಭಾರತದ ವೀರರ ಬಗ್ಗೆ ದೇಶ ಹೆಮ್ಮೆಪಡುತ್ತದೆ” ಎಂದು ಹೇಳಿದ್ದಾರೆ.

”ಕಾರ್ಗಿಲ್ ವಿಜಯ್ ಅವರ 21 ನೇ ವಾರ್ಷಿಕೋತ್ಸವದಂದು, ಇತ್ತೀಚಿನ ಇತಿಹಾಸದಲ್ಲಿ ಜಗತ್ತು ಸಾಕ್ಷಿಯಾದ ಅತ್ಯಂತ ಸವಾಲಿನ ಪರಿಸ್ಥಿತಿಗಳಲ್ಲಿ ಶತ್ರುಗಳ ವಿರುದ್ಧ ಹೋರಾಡಿದ ಭಾರತೀಯ ಸಶಸ್ತ್ರ ಪಡೆಗಳ ಕೆಚ್ಚೆದೆಯ ಸೈನಿಕರಿಗೆ ನಮಸ್ಕರಿಸಲು ನಾನು ಬಯಸುತ್ತೇನೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.

1999ರಲ್ಲಿ ಪಾಕಿಸ್ತಾನ ಸೇನೆಯು ಕಾರ್ಗಿಲ್-ಡ್ರಾಸ್ ವಲಯದಲ್ಲಿ ಅಕ್ರಮವಾಗಿ ನುಗ್ಗಿ ಭಾರತದ ಪ್ರಾಂತ್ಯಗಳನ್ನು ವಶಕ್ಕೆ ಪಡೆದಿತ್ತು. ಈ ಸಂದರ್ಭದಲ್ಲಿ ಭಾರತದ ಮೇಲೆ ಆಕ್ರಮಣ ಮಾಡಲು ಬಂದ ಪಾಕ್‌ ಸೇನೆಯ ವಿರುದ್ಧ ಮೇ ಯಿಂದ ಆರಂಭವಾಗಿ ಎರಡೂವರೆ ತಿಂಗಳ ಕಾಲ ಕಾರ್ಗಿಲ್‌ನಲ್ಲಿ ಯುದ್ಧ ನಡೆದಿದ್ದು ಜುಲೈ 29, 1999ರಂದು ಪಾಕ್‌ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಯಿತು. ಈ ಯುದ್ಧದಲ್ಲಿ ಹುತಾತ್ಮರಾದ ವೀರಯೋಧರನ್ನು ನೆನೆಯಲು ಪ್ರತಿ ವರ್ಷ ಜುಲೈ 26ನ್ನು ಕಾರ್ಗಿಲ್ ವಿಜಯ ದಿನವಾಗಿ ಆಚರಿಸಲಾಗುತ್ತಿದೆ.

More from the blog

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....