Wednesday, April 10, 2024

ಬಂಟ್ವಾಳ: ಲೊರೆಟ್ಟೊ ಚರ್ಚ್ ಗೆ ನೂತನ ಧರ್ಮಗುರುಗಳು

ಬಂಟ್ವಾಳ: ಲೊರೆಟ್ಟೊ ಚರ್ಚ್ ಗೆ ನೂತನ ಧರ್ಮ ಗುರುಗಳಾಗಿ ವಂ. ಫ್ರಾನ್ಸಿಸ್ ಕ್ರಾಸ್ತ ರವರನ್ನು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಬಂಟ್ವಾಳ ವಲಯ ಪ್ರಧಾನ ಧರ್ಮಗುರು ವಂ. ವಲೇರಿಯನ್ ಡಿಸೋಜ ಹಾಗೂ ಲೊರೆಟ್ಟೊ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಐಸಾಕ್ ವಾಸ್ ರವರು  ಹೂಗುಚ್ಛ ನೀಡಿ ಸ್ವಾಗತಿಸಿದರು.

ಧರ್ಮಗುರುಗಳ ಸೇವಾ ಸ್ಥಾನದ ಪಾರ್ಥನ ವಿಧಿಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ರವರ ಪ್ರತಿನಿಧಿಯಾಗಿ ಬಂಟ್ವಾಳ ವಲಯದ ಪ್ರಧಾನ ಧರ್ಮಗುರುಗಳಾದ ಹಾಗೂ ಮೊಡಂಕಾಪು ಚರ್ಚಿನ ಧರ್ಮಗುರುಗಳಾದ ವಂ. ವಲೇರಿಯನ್ ಡಿಸೋಜ ರವರು ನೆರವೇರಿಸಿದರು.

ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಧರ್ಮಗುರುಗಳು, ತಮ್ಮ ಸೇವಾವಧಿಯಲ್ಲಿ ಚರ್ಚಿನ ಸರ್ವತೋಮುಖ ಅಭಿವೃದ್ಧಿಗೆ ಶುಭ ಹಾರೈಸಿ,  ಧರ್ಮಗುರುಗಳಾಗಿ ಸೇವೆ ಸಲ್ಲಿಸಿ ಪಾಲಡ್ಕ ಚರ್ಚಿಗೆ ವರ್ಗಾವಣೆಗೊಂಡ ವಂದನೀಯ  ಎಲ್ಯಾಸ್  ಡಿಸೋಜ ರವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿದರು.

ನೂತನ ಧರ್ಮಗುರುಗಳಾದ ಸೇವಾ ಸ್ಥಾನವನ್ನು ಸ್ವೀಕರಿಸಿ ಮಾತನಾಡಿದ ವಂ.ಫ್ರಾನ್ಸಿಸ್ ಕ್ರಾಸ್ತಾ  ರವರು, ಯೇಸುಕ್ರಿಸ್ತರು ತಮ್ಮ ಶಿಷ್ಯರಿಗೆ ನೀಡಿದ  ಬೋಧನೆಗಳ ನೆನಪಿಸಿ, ಅವರ ಆದರ್ಶ, ತ್ಯಾಗಮಯ ಜೀವನವನ್ನು   ಸಮುದಾಯ ದಲ್ಲಿ ಅಳವಡಿಸಿ ಒಂದು ಕುಟುಂಬದ ಸದಸ್ಯರಂತೆ ಚರ್ಚ್ ನ ಉತ್ತಮ ಎಳಿಗೆಗೆ ಶ್ರಮಿಸೋಣ ಎಂದು ಹೇಳಿ ಎಲ್ಲಾ ಭಕ್ತಾದಿಗಳ ಸಹಕಾರ ಕೋರಿದರು. ಕಾರ್ಯಕ್ರಮದಲ್ಲಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ವಂ. ಪೀಟರ್ ಗೊನ್ಸಾಲ್ವಿಸ್, ಶಿರ್ತಾಡಿ ಚರ್ಚಿನ ಧರ್ಮಗುರುಗಳಾದ ವಂ. ಹೆರಾಲ್ಡ್  ಮಸ್ಕರೇನಸ್, ನಿರ್ಮಲ ಕಾನ್ವೆಂಟ್ ನ  ಸುಪಿರಿಯರ್ ಆಗ್ನೆಸ್ ಅಂದ್ರಾದೆ ಉಪಸ್ಥಿತರಿದ್ದರು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಐಸಕ್ ವಾಸ್ ಸ್ವಾಗತಿಸಿದರು, ಕಾರ್ಯದರ್ಶಿ ಆಲ್ವಿನ್ ಪಿಂಟೊ ವಂದಿಸಿದರು. ರೋಶನ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...