Sunday, April 7, 2024

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಲ್ಲಿ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ ಮತ್ತು ಏ.ಟಿ.ಎಂ ಗೆ ಸಾರ್ವಜನಿಕರ ಆಗ್ರಹ

ಬಂಟ್ವಾಳ: ಗ್ರಾಮಾಂತರ ಪ್ರದೇಶಗಳ ಕೇಂದ್ರ ,ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಸಂಗಮ ಸ್ಥಾನ ಮಾಣಿ ಊರಿನಲ್ಲಿ ಈಗಾಗಲೇ ಬ್ಯಾಂಕ್ ಆಫ್ ಬರೋಡ ರಾಷ್ಟ್ರೀಕೃತ ಬ್ಯಾಂಕ್ ಇದ್ದು, ಮತ್ತೊಂದು ಎ.ಟಿ.ಎಂ. ಸಹಿತ ರಾಷ್ಟ್ರೀಕೃತ ಬ್ಯಾಂಕ್ ಬೇಕು ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತದೆ.

ಈಗಾಗಲೇ ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಬ್ಯಾಂಕಿಂಗ್ ವ್ಯವಹಾರಕ್ಕೆ ಸರದಿ ಸಾಲಲ್ಲಿ ನಿಂತು ಕಷ್ಟ ಅನುಭವಿಸಿದ ಹಿನ್ನೆಲೆ  ಮತ್ತೊಂದು ರಾಷ್ಟ್ರೀಕೃತ ಬ್ಯಾಂಕು ಅವಶ್ಯಕತೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಮಾಣಿಯಲ್ಲಿ ಇರುವ ಬ್ಯಾಂಕ್ ಆಫ್ ಬರೋಡದ ಬ್ಯಾಂಕ್ ಶಾಖೆಯಲ್ಲಿ ಜನದಟ್ಟಣೆ ಯಾವಾಗಲೂ ಇರುವುದರಿಂದ ತುರ್ತು ಬ್ಯಾಂಕಿಂಗ್ ವ್ಯವಹಾರದ ಅವಶ್ಯಕತೆ ಇರುವ ಜನರು ಮಾತ್ರವಲ್ಲದೆ ಮಾಣಿ ಗ್ರಾಮದ ಹೆಚ್ಚಿನ ಗ್ರಾಮಸ್ಥರು ಕಲ್ಲಡ್ಕ, ಕಬಕ, ಪುತ್ತೂರು, ಬಿ.ಸಿ. ರೋಡ್ ನ ಬೇರೆ ಬೇರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬ್ಯಾಂಕಿಂಗ್ ವ್ಯವಹಾರಕ್ಕೆ ಅವಲಂಬಿಸಿದ್ದಾರೆ. ಮಾಣಿಯಲ್ಲಿ ಬ್ಯಾಂಕ್ ಆಫ್ ಬರೋಡ ದ ಏ.ಟಿ.ಎಂ. ಕಾರಣಾಂತರಗಳಿಂದ ಸ್ತಗಿತಗೊಂಡಿದೆ. ಜನರಿಗೆ ತುರ್ತು ಹಣ ಪಡೆಯಲು, ಕಡಿಮೆ ವಿದ್ಯಾಬ್ಯಾಸ ಹೊಂದಿದ ಗ್ರಾಮೀಣ ಪ್ರದೇಶದ ಜನರಿಗೆ ಏ.ಟಿ.ಎಂ.ಮತ್ತು ನೆಟ್ ಬ್ಯಾಂಕಿಂಗ್, ಗೂಗಲ್ ಪೇ, ಫೋನ್ ಪೇ ನಂತಹ ಕ್ಯಾಶ್ ಲೆಸ್ ವ್ಯವಸ್ಥೆ ಬಳಸಲು ಗೊತ್ತಿಲ್ಲ. ಆದ್ದರಿಂದ ಮಾಣಿಯಲ್ಲಿ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ ಆಗಲೇಬೇಕು ಎಂಬ ಜನರ ಬಹು ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದ್ದರಿಂದ ಶೀಘ್ರವಾಗಿ ಮಾಣಿ ಊರಿಗೆ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ ಆರಂಭವಾಗಲಿ ಸಂಬಂಧಪಟ್ಟ ಜನಪ್ರತಿನಿದಿಗಳು ,ಅದಿಕಾರಿಗಳು ಈ ಬಗ್ಗೆ ಗಮನಹರಿಸಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...