Sunday, April 7, 2024

30 ಕೋ.ರೂ.ಅನುದಾನದಲ್ಲಿ ಮೂರು ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

ಬಂಟ್ವಾಳ: ಬಹಳ ಸಮಯಗಳ ಬೇಡಿಕೆ ಇದ್ದ ಬಂಟ್ವಾಳ ಕ್ಷೇತ್ರದ ಮೂರು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಅಗಲೀಕರಣಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಿಂದ ಅನುದಾನ ಮೀಸಲಿರಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲು ಹೇಳಿದರು.

ಅವರು ಬುಧವಾರ ಬಂಟ್ವಾಳ ಕ್ಷೇತ್ರಕ್ಕೆ ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಡಿ ಮಂಜೂರಾದ ಒಟ್ಟು 30 ಕೋ.ರೂ.ಅನುದಾನದಲ್ಲಿ ಮೂರು ರಸ್ತೆ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜತೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.


ಈ ಕಾಮಗಾರಿಗಳಿಗೆ ಅನುದಾನ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಾರಿಗೆ ಸಚಿವ ನಿತಿನ್ ಘಡ್ಕರಿ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ರಸ್ತೆಗೆ ಪ್ರಸ್ತಾವನೆ ನೀಡಿರುವ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಹಿರಿಯರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಗೋಳ್ತಮಜಲು-ಮಂಚಿಕಟ್ಟೆ-ನೀರಬೈಲು-ಕೇಶವನಗರ-ಅಮ್ಮೂರು ರಸ್ತೆ 14.33 ಕೋ.ರೂ, ಕೊಳ್ನಾಡು-ಬೊಲ್ಪಾದೆ-ಮಾದರಮೂಲೆ ರಸ್ತೆಗೆ 9.03 ಕೋ.ರೂ. ಹಾಗೂ ಕನ್ಯಾನ-ನೆಕ್ಕರೆಕಾಡು-ಬಾಳೆಕೋಡಿ-ಅಕ್ಕರೆಕೋಡಿ-ಬೇರಿಪದವು ರಸ್ತೆಗೆ 6.67 ಕೋ.ರೂ.ಗಳಲ್ಲಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ, ಮಂಜುಳಾ ಮಾಧವ ಮಾವೆ, ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯ ಮಹಾಬಲ ಆಳ್ವ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ನೇಮಿರಾಜ ರೈ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಸಂದೇಶ ಶೆಟ್ಟಿ, ವಜ್ರನಾಥ ಕಲ್ಲಡ್ಕ, ನಾರಾಯಣ ಕುಲಾಲ್, ಮೋನಪ್ಪ ದೇವಸ್ಯ, ಮುಸ್ತಫಾ ಕೆ.ಎಸ್, ಗಣೇಶ್ ರೈ ಮಾಣಿ, ಗುತ್ತಿಗೆದಾರ ಪ್ರೇಮನಾಥ್ ಮೊದಲಾದವರು ಉಪಸ್ಥಿತರಿದ್ದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...