Thursday, April 18, 2024

ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಅಸ್ತಿತ್ವಕ್ಕೆ

ಮುಂಬಯಿ (ಮಂಗಳೂರು): ಕರ್ನಾಟಕ ರಾಜ್ಯದ ಜಿಲ್ಲಾ ಮತ್ತು ಪ್ರಾದೇಶಿಕ ಎಲ್ಲಾ ಪತ್ರಿಕೆಗಳು ಸೇರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹೊಸದಾಗಿ ಸಂಘ ರಚನೆಗೊಂಡಿದ್ದು, ಸದರಿ ಸಂಘಕ್ಕೆ ರಾಜ್ಯ ಕಾರ್ಯದರ್ಶಿ ಆಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಪ್ರಕಟಗೊಳ್ಳುತ್ತಿರುವ ಜಯಕಿರಣ ಪತ್ರಿಕೆಯ ಪ್ರಕಾಶಕ ಪ್ರಕಾಶ್ ಪಾಂಡೇಶ್ವರ್ ಆಯ್ಕೆ ಗೊಂಡಿದ್ದಾರೆ.

ಸಂಪಾದಕರ ರಾಜ್ಯ ಸಂಘಕ್ಕೆ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ಯು.ಪಿ.ಶಿವಾನಂದ ನೇಮಕಗೊಂಡಿದ್ದಾರೆ. ಸಂಘಕ್ಕೆ ರಾಜ್ಯಾಧ್ಯಕ್ಷರಾಗಿ ಹಾಸನದ ಪ್ರಜೋದಯ ಪತ್ರಿಕೆಯ ಜೆ.ಆರ್ ಕೆಂಚೇಗೌಡ ಆಯ್ಕೆ ಗೊಂಡರೆ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗು ಜಿಲ್ಲೆಯ ಪ್ರಜಾಸತ್ಯ ಪತ್ರಿಕೆಯ ಡಾ.ಬಿ.ಸಿ.ನವೀನ್ ಕುಮಾರ್ ಆಯ್ಕೆಯಾಗಿದ್ದಾರೆ.

ಹಾಸನ ಜಿಲ್ಲೆಯ ಜನಮಿತ್ರ ಪತ್ರಿಕೆಯ ಹೆಚ್.ಬಿ.ಮದನಗೌಡ ಸಮಿತಿಯ ಸಂಚಾಲಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಸೋಮಶೇಖರ ಕೆರಗೂಡು ಮತ್ತು ಶಿವಮೊಗ್ಗ ಟೆಲೆಕ್ಸ್ ಪತ್ರಿಕೆಯ ಎನ್.ರವಿ ಕುಮಾರ್ ಸಂಘಟನಾ ಸಂಚಾಲಕರಾಗಿ ನೇಮಕ ಗೊಂಡಿದ್ದಾರೆ. ಪಾಂಡೇಶ್ವರ್ ಮತ್ತು ಸರ್ವ ಪದಾಧಿಕಾರಿಗಳಿಗೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ರಾಜ್ಯ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅಭಿನಂದಿಸಿದ್ದಾರೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...