Monday, April 8, 2024

ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ತೇಪೆ ಕಾರ್ಯ

ಬಂಟ್ವಾಳ: ರಾಷ್ಟೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ವು ತೇಪೆ ಕಾರ್ಯವನ್ನು ಪ್ರಾರಂಭಿಸಿದ್ದು, ಗುರುವಾರ ಬಿ.ಸಿ.ರೋಡಿನಲ್ಲಿ ಹೊಂಡಗಳಿಗೆ ತೇಪೆ ಹಾಕಿ ಮುಚ್ಚಲಾಯಿತು.

ಬಿ.ಸಿ.ರೋಡಿನಲ್ಲಿ ಹೆದ್ದಾರಿಯಲ್ಲಿ ಕೆಲವೊಂದು ಕಡೆ ಬೃಹತ್ ಹೊಂಡಗಳು ಕಾಣಿಸಿಕೊಂಡ ಪರಿಣಾಮ ಅಪಾಯ ಪರಿಸ್ಥಿತಿ ಉಂಟಾಗಿತ್ತು. ಜತೆಗೆ ಕೆಲವೊಂದು ಬೈಕ್ ಸವಾರರು ಬಿದ್ದಿರುವ ಘಟನೆಗಳು ಕೂಡ ನಡೆದಿದೆ. ಹೀಗಾಗಿ ಹೆದ್ದಾರಿ ಮಧ್ಯದಲ್ಲೇ ಬ್ಯಾರಿಕೇಡ್ ಅಡ್ಡಲಾಗಿ ಇಡಲಾಗಿತ್ತು.
ಪ್ರಾಧಿಕಾರ ತೇಪೆ ಕಾರ್ಯ ಪ್ರಾರಂಭಿಸಿದ್ದು, ಬಿ.ಸಿ.ರೋಡಿನಿಂದ ನೆಲ್ಯಾಡಿ ಭಾಗದವರೆಗೂ ತೇಪೆ ಕಾರ್ಯ ನಡೆಸುವ ಕುರಿತು ಕಾಮಗಾರಿ ನಿರ್ವಹಿಸುವ ಕಾರ್ಮಿಕರು ತಿಳಿಸಿದ್ದಾರೆ.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ (...

ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...