Saturday, April 6, 2024

ವೀರಕಂಭದ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ: ಪರಿಸರ ಜಾಗೃತಿ ಕಾರ್ಯಕ್ರಮ

ಕಲ್ಲಡ್ಕ: ಕಲ್ಲಡ್ಕ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ವೀರಕಂಭದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಮಜಿಯಲ್ಲಿ ವೀರಕಂಭ ಒಕ್ಕೂಟದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ಜರಗಿತು.
ಒಕ್ಕೂಟದ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ ಅವರು, ಶಾಲಾ ಔಷಧಿ ವನದಲ್ಲಿ ಲಿಂಬೆ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಪ್ರೇಮಾ ಈ ಕಾರ್ಯಕ್ರಮದ ಧ್ಯೇಯೋದ್ದೇಶ,ಯೋಜನೆಯ ಕಾರ್ಯಕ್ರಮ ಹಾಗೂ ಕೋವಿಡ್-19 ಕುರಿತು ಮಾಹಿತಿ ನೀಡಿದರು. ಗುಂಪಿನ ಸದಸ್ಯರಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಸದಸ್ಯ ವೀರಪ್ಪ ಮೂಲ್ಯ, ಶಾಲಾ ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗುಲ್ಸನ ಬಾನು ಸ್ವಾಗತಿಸಿ, ಸುನಿತಾ ವಂದಿಸಿದರು. ಸೇವಾ ಪ್ರತಿನಿಧಿ ರೇವತಿ ಕಾರ್ಯಕ್ರಮ ನಿರೂಪಿಸಿದರು.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...