Thursday, October 26, 2023

ಪುದು ಗ್ರಾ.ಪಂ. ವ್ಯಾಪ್ತಿಯಲ್ಲಿ ಇಂದಿನಿಂದ ಮುಂದಿನ 14 ದಿನಗಳ ಕಾಲ ಸ್ವಯಂಪ್ರೇರಿತ ಬಂದ್

Must read

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿನಿಂದ ಮುಂದಿನ 14 ದಿನಗಳ ಕಾಲ ಮಧ್ಯಾಹ್ನ ದ ಬಳಿಕ ಸ್ವಯಂಪ್ರೇರಿತ ಬಂದ್ .

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ತಾಲೂಕಿನ ಫರಂಗಿಪೇಟೆ ಸೇರಿದಂತೆ ಪುದು ಗ್ರಾ.ಪಂ.ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಯ ಬಳಿಕ ಸ್ವಯಂಪ್ರೇರಿತ ಬಂದ್ ನಡೆಸಲಾಯಿತು.


ಗ್ರಾಮದಲ್ಲಿ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸ್ಥಳೀಯ ವರ್ತಕರು, ಆಟೋ ಚಾಲಕರು ಸೇರಿದಂತೆ ಎಲ್ಲರಲ್ಲೂ ೧೪ ದಿನಗಳ ಕಾಲ ಮಧ್ಯಾಹ್ನ 2 ಗಂಟೆಯ ಬಳಿಕ ಬಂದ್ ನಡೆಸುವಂತೆ ಮನವಿ ಮಾಡಲಾಗಿತ್ತು. ವೈದ್ಯರ ಕ್ಲಿನಿಕ್‌ಗಳು ಹಾಗೂ ಮೆಡಿಕಲ್‌ಗಳು ಹೊರತು ಪಡಿಸಿ ಉಳಿದವು ಬಂದ್ ಆಗಿತ್ತು. ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆರೋಗ್ಯಕೇಂದ್ರದ ವ್ಯಾಪ್ತಿಯಲ್ಲಿ ಒಟ್ಟು 16 ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ.

ವರ್ತಕರು ಕೋವಿಡ್ 19 ನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಾಗೃತಿಗಾಗಿ ಸ್ವಯಂಪ್ರೇರಿತರಾಗಿ ಬಂದ್ ಮಾಡಿ ದ ವರ್ತಕರಿಗೆ ಮಾಜಿ ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ಅಭಿನಂದನೆ ಸಲ್ಲಿಸಿದ್ದಾರೆ.

More articles

Latest article