Friday, April 12, 2024

ವಿದೇಶದಿಂದ ಬರುವವರಿಗೂ ಇನ್ಮುಂದೆ 7 ದಿನಗಳ ಹೊಟೇಲ್‌ ಕ್ವಾರಂಟೈನ್‌ ಇಲ್ಲ

ಮಂಗಳೂರು: ಕ್ವಾರಂಟೈನ್ ಸಂಬಂಧಿಸಿದಂತೆ ಹಲವಾರು ವ್ಯತ್ಯಾಸಗಳಾಗುತ್ತಿದ್ದು,ವಿದೇಶದಿಂದ ಬಂದವರು ಈವರೆಗೂ ಕಡ್ಡಾಯವಾಗಿ 7 ದಿನಗಳ ಹೊಟೇಲ್‌ ಕ್ವಾರಂಟೈನ್‌ಗೆ ಒಳಗಾಗಬೇಕಿತ್ತು. ಆದರೆ ಇನ್ನು ಮುಂದೆ ವಿದೇಶದಿಂದ ಬರುವವರು 7 ದಿನಗಳ ಕಾಲ ಹೊಟೇಲ್‌ ಕ್ವಾರಂಟೈನ್‌ಗೆ ಒಳಗಾಗಬೇಕಾಗಿಲ್ಲ.
ಪ್ರಭಾರ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರತ್ನಾಕರ್‌ ಅವರು ಈ ಬಗ್ಗೆ ಮಾಹಿತಿ ನೀಡಿ,ಅಂತರ್‌ ರಾಷ್ಟ್ರೀಯ ಪ್ರಯಾಣಿಕರು ಅಂದರೆ ವಿದೇಶದಿಂದ ಬಂದವರನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಹೊಟೇಲ್‌ಗೆ ಕರೆತರಲಾಗುವುದು. ಬಳಿಕ ಒಂದು ದಿನ ಹೊಟೇಲ್‌ನಲ್ಲಿ ಇರುತ್ತಾರೆ. ಅದರ ಮರುದಿನವೇ ನಮ್ಮ ತಂಡ ಹೋಗಿ ರ್‍ಯಾಪಿಡ್‌ ಆಂಟಿಜನ್‌ ಟೆಸ್ಟ್‌ ನಡೆಸುವುದು. ಇದರಿಂದಾಗಿ ಅರ್ಧ ಗಂಟೆಯಲ್ಲೇ ಸ್ವಾಬ್‌ನ ವರದಿ ಲಭ್ಯವಾಗುತ್ತದೆ. ಒಂದು ವೇಳೆ ವರದಿ ನೆಗೆಟಿವ್‌ ಬಂದ್ದಲ್ಲಿ ಅವರನ್ನು ಅಲ್ಲಿಂದ ಮನೆಗೆ ಕಳುಹಿಸಲಾಗುವುದು. ಹಾಗಾಗಿ ವಿದೇಶದಿಂದ ಬಂದವರು 7 ದಿನಗಳ ಕಾಲ ಹೊಟೇಲ್‌ ಕ್ವಾರಂಟೈನ್‌ಗೆ ಒಳಗಾಗಬೇಕಾದ ಅವಶ್ಯಕತೆಯಿಲ್ಲ. ಆದರೆ ಮನೆಗೆ ಹೋದ ಬಳಿಕ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು” ಎಂದು ಸ್ಪಷ್ಟಪಡಿಸಿದ್ದಾರೆ.
ಈ ಮೊದಲು ಮಹಾರಾಷ್ಟ್ರದಿಂದ ಬರುವವರಿಗೆ ಹೊಟೇಲ್‌ ಕ್ವಾರಂಟೈನ್‌ ಅಥವಾ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಬೇಕು ಎಂಬ ನಿಯಮವಿದ್ದು, ಆ ಮಾರ್ಗಸೂಚಿಯಲ್ಲಿ ಬದಲಾವಣೆ ತರಲಾಗಿದೆ. ಈ ಪ್ರಕಾರವಾಗಿ ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯದಿಂದ ಬಂದವರಿಗೆ ಯಾವುದೇ ರೀತಿಯ ಹೊಟೇಲ್‌ ಕ್ವಾರಂಟೈನ್‌ ಇಲ್ಲ. ಅವರನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್‌ ಮಾಡಲಾಗುತ್ತದೆ. ಈ ದಿನಗಳಲ್ಲಿ ಯಾವುದಾದರು ರೋಗ ಲಕ್ಷಣಗಳು ಕಂಡು ಬಂದರೆ ಅವರ ಸ್ವಾಬ್‌ ಟೆಸ್ಟ್‌ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...