Sunday, October 22, 2023

ಧಾರಾಕಾರ ಮಳೆ ಸಾಧ್ಯತೆ ಹಿನ್ನೆಲೆ ಕರಾವಳಿಯಲ್ಲಿ ಆರೆಂಜ್‌ ಅಲರ್ಟ್ ಘೋಷಣೆ

Must read

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಜುಲೈ. 2 ಮತ್ತು 3ರಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಗಾಳಿ ತೀವ್ರವಾಗಿರುವ ಕಾರಣದಿಂದ ಕರಾವಳಿಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.

ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಧಾರವಾಡ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರ್ಗಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

More articles

Latest article