Saturday, April 13, 2024

ಹುತಾತ್ಮ ಶರತ್ ಮಡಿವಾಳರ ಸ್ಮರಣ ದಿನದ ಅಂಗವಾಗಿ ಕಾರ್ಯಕರ್ತರು ಗಿಡ ನೆಟ್ಟು ನಮನ

ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ಶರತ್ ಮಡಿವಾಳರ ಬಲಿದಾನ ಸ್ಮರಣ ದಿನ ಸಜೀಪ ವಲಯದ ಸಂಘ ಪರಿವಾರದ ಕಾರ್ಯಕರ್ತರು ತಮ್ಮ ತಮ್ಮ ಮನೆ ಮತ್ತು ವಠಾರದಲ್ಲಿ ಗಿಡ ನೆಡುವ ಮೂಲಕ ಹುತಾತ್ಮ ಸ್ವಯಂಸೇವಕ ಶರತ್ ಮಡಿವಾಳರಿಗೆ ನಮನ ಸಲ್ಲಿಸಿದರು.

ಸಜೀಪದ ಸಂಘ ಪರಿವಾರದ ಕಾರ್ಯಕರ್ತರು ಹುತಾತ್ಮ ಸ್ವಯಂಸೇವಕನ ಸ್ಮಾರಕ ಪೀಠದಲ್ಲಿ ಸೇರದೇ ತಮ್ಮ ತಮ್ಮ ಮನೆಗಳಲ್ಲೇ ಶರತ್ ಮಡಿವಾಳರನ್ನು ಮನಃಪೂರ್ವಕವಾಗಿ ನೆನೆದು ನಮಿಸಿ ಸ್ಮರಿಸುವ ಜೊತೆಗೆ ಕೊರೋನ ವಿರುದ್ಧ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿದರು.

ಹುತಾತ್ಮನ ಬಲಿದಾನದ ದಿನ ಗೌರವಾರ್ಥವಾಗಿ ಪರಿಸರ ಜಾಗೃತಿ ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸಿ ಶಿಸ್ತು ಮತ್ತು ಜವಾಬ್ದಾರಿ ತೋರಿದ ಸಜೀಪದ ಸಂಘ ಪರಿವಾರದ ಕಾರ್ಯಕರ್ತರ ಬಗ್ಗೆ ಎಲ್ಲಾ ಕಡೆ ಪ್ರಶಂಸೆ ವ್ಯಕ್ತವಾಗಿದೆ.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...