Saturday, April 13, 2024

ಸವಣಾಲು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಕುರಿತು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಸವಣಾಲು ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ತೋಟಗಾರಿಕಾ ಇಲಾಖೆಯ ವತಿಯಿಂದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಕುರಿತು ಮಾಹಿತಿ ಕಾರ್ಯಕ್ರಮ  ನಡೆಯಿತು.

ಈ ಕಾರ್ಯಕ್ರಮದಲ್ಲಿ ಅಳದಂಗಡಿ ತೋಟಗಾರಿಕಾ ರೈತ ಉತ್ಪದಕರ್ ಕಂಪೆನಿಯ ಅಧ್ಯಕ್ಷ ಹರಿದಾಸ ಮಾತನಾಡಿ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಮಾಹಿತಿ ನೀಡಿದರು. ಕಂಪೆನಿಯ ನಿರ್ದೇಶಕ ಶಿವ ಕುಮಾರ್ ಮಾತನಾಡಿ, ಕಟ್ಟಡ ನಿರ್ಮಾಣ ಕಾರ್ಮಿಕ ಸವಲತ್ತು ಬಗ್ಗೆ ಮಾಹಿತಿ ನೀಡಿದರು. ನಂತರ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲಾಯಿತು. ರಾಜೀವ್ ಸಾಲ್ಯಾನ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ರಾಜೇಶ್ ಭಟ್, ರಾಜೇಶ್ ಸವಣಾಲು, ಜಯಾನಂದ್ ಸವಣಾಲು, ಸಂಕೇತ್ ಸವಣಾಲು ಉಪಸ್ಥಿತರಿದ್ದರು.

More from the blog

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ...

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...