Saturday, April 6, 2024

ಶಂಭೂರು: ಪೊರ್ಸ ಪಾಲು ಪ್ರಗತಿ ಬಂಧು ಸಂಘದ ಉದ್ಘಾಟನೆ

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ವಲಯ ಶಂಭೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್‍ಯಕ್ಷೇತ್ರದಲ್ಲಿ ಪೊರ್ಸ ಪಾಲು ಎಂಬ ಹೆಸರಿನ ಪ್ರಗತಿ ಬಂಧು ಸ್ವ ಸಹಾಯ ಸಂಘ ತೆಂಗಿನ ಗಿಡ ನೆಡುವ ಮೂಲಕ ಉದ್ಘಾಟಿಸಲಾಯಿತು.
ವಲಯದ ಮೇಲ್ವಿಚಾಲಕಿ ಅಮಿತಾರವರು ಸಂಘದ ನಿರ್ವಹಣೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಕಾರ್‍ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಸಂಘದ ಅಧ್ಯಕ್ಷರಾಗಿ ಚೇತನಾ, ಕಾರ್‍ಯದರ್ಶಿಯಾಗಿ ಶ್ವೇತಾ, ಕೋಶಾಧಿಕಾರಿಯಾಗಿ ಪದ್ಮಲತಾ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಭಾಗದ ಸೇವಾ ಪ್ರತಿನಿಧಿ ಲಕ್ಷ್ಮೀ ಹಾಗೂ ಸ್ವಸಹಾಯ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...