Friday, April 19, 2024

ಸಂಡೆ ಲಾಕ್ ಡೌನ್ ಹಿನ್ನೆಲೆ ದ.ಕ. ಜಿಲ್ಲೆ ಬಹುತೇಕ ಸ್ತಬ್ದ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರ ಸಂಪೂರ್ಣ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ. ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದೆ. ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಮಾರುಕಟ್ಟೆ ಪ್ರದೇಶಗಳು ಜನರು ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿವೆ.

ಒಂದು ವಾರದ ಲಾಕ್ ಡೌನ್ ಇದ್ದರೂ ಬೆಳಿಗ್ಗೆ 8-11 ಗಂಟೆಯ ವರೆಗೆ ತರಕಾರಿ ಸೇರಿದಂತೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಇಂದು ಅದಕ್ಕೆ ಅನುಮತಿ ನೀಡಲಾಗಿಲ್ಲ. ಬೆಳಿಗ್ಗೆ 11ರ ವರೆಗೆ ಹಾಲು ಖರೀದಿಗೆ ಅವಕಾಶ ನೀಡಲಾಗಿತ್ತು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...