Friday, April 12, 2024

ದ.ಕ. ಜಿಲ್ಲೆ: ನಾಳೆ ಭಾನುವಾರ(ಜು.19) ಸಂಪೂರ್ಣ ಲಾಕ್ ಡೌನ್

ಮಂಗಳೂರು‌‌: ದ.ಕ.ಜಿಲ್ಲೆಯಲ್ಲಿ ನಾಳೆ ಜು. 19 ರ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್‌‌ ಇರಲಿದ್ದು, ಪ್ರತಿ ದಿನದಂತೆ ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಲಾಕ್ ಡೌನ್ ರಿಯಾಯಿತಿ ಇಲ್ಲ.
ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಪ್ರತೀ ಭಾನುವಾರ ಲಾಕ್‌ಡೌನ್‌‌‌ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು. ಅಲ್ಲದೇ, ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ವಾಹನ ಓಡಾಟ ಹಾಗೂ ಜನರ ಓಡಾಟಕ್ಕೆ ನಿಷೇಧ ಹೇರಲಾಗಿತ್ತು. ಜು.19ರ ಭಾನುವಾರದಂದೂ ಕೂಡಾ ಜಿಲ್ಲೆ ಸಂಪೂರ್ಣ ಲಾಕ್‌ಡೌನ್‌ ಆಗಲಿದ್ದು, ಜಿಲ್ಲಾಡಳಿತ ಈ ಹಿಂದೆ ಘೋಷಣೆ ಮಾಡಿದ್ದ ಸಂಡೇ ಲಾಕ್‌‌ಡೌನ್‌‌‌‌ ಯಥಾಸ್ಥಿತಿಯಾಗಿ ಮುಂದುವರೆಯಲಿದೆ.
ಲಾಕ್‌‌ಡೌನ್‌ ಇದ್ದರೂ ಕೂಡಾ ಪ್ರತಿ ದಿನ ಜನರಿಗೆ ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳು ಹಾಗೂ ಮೂಲಭೂತ ಅವಶ್ಯಕತೆಗಳನ್ನು ಖರೀದಿ ಮಾಡಲು ರಿಯಾಯಿತಿ ನೀಡಲಾಗಿತ್ತು. ಆದರೆ, ನಾಳೆ ಭಾನುವಾರ ಆ ರಿಯಾಯಿತಿ ಇರುವುದಿಲ್ಲ.

More from the blog

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ...

ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ 58,78,880 ರೂಪಾಯಿ ಮೌಲ್ಯದ 812 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...