Thursday, April 18, 2024

ಜುಲೈ 31ಕ್ಕೆ ಅನ್ ಲಾಕ್ 2.0 ಅಂತ್ಯ: ಆಗಸ್ಟ್ 1 ರಿಂದ ಅನ್ ಲಾಕ್ 3.0 ಪ್ರಾರಂಭ

ನವದೆಹಲಿ: ಕೋವಿಡ್-19 ಹಿನ್ನೆಲೆ ವಿಧಿಸಲಾಗಿರುವ ನಿರ್ಬಂಧದ ಅನ್ ಲಾಕ್ 2.0 ಜು. 31ರಂದು ಅಂತ್ಯವಾಗಲಿದ್ದು, ಆಗಸ್ಟ್ 1 ರಿಂದ ಅನ್ ಲಾಕ್ 3.0 ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಲು ಸಿದ್ಧವಾಗಿದೆ. ಈ ಬಗ್ಗೆ ಇಂದು ಪ್ರದಾನ ಮಂತ್ರಿ ರಾಜ್ಯಗಳ ಸಿ.ಎಂ. ಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಅನ್ ಲಾಕ್ 3.0 ಆಗಸ್ಟ್ 1ರಿಂದ ಕೇಂದ್ರ ಸರ್ಕಾರ ಜಾರಿಗೆ ತರಲಿದ್ದು, ಜುಲೈ 31 ರಂದು ಮುಗಿಯಲಿರುವ ಅನ್ ಲಾಕ್ 2.0 ನಲ್ಲಿ ಹಲವು ವಿಷಯಗಳಿಂದ ನಿರ್ಬಂಧ ಸಡಿಲಿಸಿ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಬಹುದು. ಇನ್ನಷ್ಟು ನಿರ್ಬಂಧ ಸಡಿಲಿಸಬಹುದು ಎಂದು ಹೇಳಲಾಗುತ್ತಿದೆ. ಆಗಸ್ಟ್ 1ರಿಂದ ನಿರ್ದಿಷ್ಟ ಕಾರ್ಯವಿಧಾನ, ಸಾಮಾಜಿಕ ಅಂತರ ಕಾಯ್ದುಕೊಂಡು ಸಿನೆಮಾ ಹಾಲ್, ಜಿಮ್ ತೆರೆಯಲು ಕೇಂದ್ರ ಸರ್ಕಾರ ಅವಕಾಶ ನೀಡಬಹುದು ಎಂದು ಊಹಿಸಲಾಗಿದೆ. ಆದರೆ, ಮೂರನೇ ಅನ್ ಲಾಕ್ ಹಂತದಲ್ಲಿ ಮೆಟ್ರೋ ಸಂಚಾರ ಸೇವೆ, ಶಾಲಾ ಕಾಲೇಜುಗಳಿಗೆ ನಿರ್ಬಂಧ ಮುಂದುವರಿಯಬಹುದು.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...