Saturday, April 20, 2024

ವೇಣೂರು: ಪಾಳುಬಿದ್ದ ಗದ್ದೆಯನ್ನು ಉಳುಮೆ ಮಾಡಿದ ಪುಟ್ಟ ಕೈಗಳು

ಬೆಳ್ತಂಗಡಿ: ತಾಲೂಕಿನ ವೇಣೂರು ಕರಿಮಣೇಲು ಎಂಬಲ್ಲಿ 11 ವರ್ಷಗಳಿಂದ ಪಾಳುಬಿದ್ದಿರುವ ಗದ್ದೆಯನ್ನು ಶಾಲೆಗೆ ಹೋಗುವ ಮಕ್ಕಳು ಉಳುಮೆ ಮಾಡಿ ಮಾದರಿಯಾಗಿದ್ದಾರೆ.

ಅಜ್ಜ ನೋಡಿಕೊಳ್ಳುತಿದ್ದ ಗದ್ದೆ ಅಜ್ಜನ ಸಾವಿನ ನಂತರ ಪಾಳು ಬಿದ್ದಿತ್ತು.ಈ ಮಕ್ಕಳು ತಾವೇ‌ ಟ್ರಾಕ್ಟರ್ ತರಿಸಿ ಉಳುಮೆ ಮಾಡಿಸಿ ಹಣವನ್ನು ತಾವೇ ನೀಡಿ ಬೇಸಾಯ ಮಾಡುವ ಆಸಕ್ತಿಯನ್ನು ತೋರಿದ್ದಾರೆ.

15 ವರುಷ ಪ್ರಾಯದ ಸುಕೇಶ್ ಹಾಗು ಜ್ಞಾನೇಶ್ ಪಾಳುಬಿದ್ದ ಗದ್ದೆಯ ಬೇಸಾಯ ಮಾಡಲು‌ ಆಸಕ್ತಿ ತೋರಿದ ಪುಟ್ಟ ಮಕ್ಕಳು. ತನ್ನ ತಾಯಿ ಹಾಗು ಅಕ್ಕಂದಿರ ಮಾರ್ಗದರ್ಶನದಂತೆ ಈ ಮಕ್ಕಳು ಬೇಸಾಯದ ಮೊದಲ ಹಂತ ಗದ್ದೆ ಉಳುಮೆಯನ್ನು ಮಾಡಿದ್ದಾರೆ.

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...