Monday, April 8, 2024

ಲಾಕ್ ಡೌನ್ ಸಮಸ್ಯೆಯಿಂದ ಬಾರದ ಔಷಧಿ: ಸಹಾಯದ ಹಸ್ತ ಚಾಚಿದ ಮುಂಬಾಯಿ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ

ವಿಟ್ಲ: ಕರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮುಂಬಯಿನಿಂದ ಕೇಪು ಗ್ರಾಮದ ಅಟೋಚಾಲಕರೊಬ್ಬರಿಗೆ ಬರಬೇಕಾದ ಅಗತ್ಯ ಔಷಧಿ ಪಾರ್ಸೆಲ್ ಅನ್ನು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅವರು ಮುತುವರ್ಜಿ ವಹಿಸಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇಪು ಗ್ರಾಮದ ಅಟೋಚಾಲಕರೊಬ್ಬರ ಪತ್ನಿಗೆ ವೈದ್ಯರ ಶಿಫಾರಸ್ಸಿನ ಮೇರೆಗೆ ಮುಂಬಯಿನ ಕಂಪನಿಯೊಂದು ಉಚಿತವಾಗಿ ಔಷಧಿಯನ್ನು ನೀಡುತ್ತಿತ್ತು. ಆದರೆ ಕರೊನಾ ಲಾಕ್ ಡೌನ್ ಗಳು ಆರಂಭವಾಗುತ್ತಿದ್ದಂತೆ ಔಷಧಿಯ ಬೇಡಿಕೆ ಸಲ್ಲಿಸಿದರೂ, ಯಾವುದೇ ಪ್ರತಿಕ್ರಿಯೆ ಲಭಿಸಿರಲಿಲ್ಲ. ಔಷಧಿ ಕೊರತೆಯ ಬಗ್ಗೆ ಪಿಎಂ ಪೋರ್ಟಲ್ ಸಹಿತ ಹಲವು ವ್ಯವಸ್ಥೆಯನ್ನು ಸಂಪರ್ಕಿಸಿದರೂ ಪ್ರಯೋಜನವಾಗದ ಸಮಯದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅವರು ಸಹಾಯಕ್ಕೆ ನಿಂತಿದ್ದಾರೆ. ತಕ್ಷಣ ಕಂಪನಿಯ ಬಗ್ಗೆ ವಿಚಾರಿಸಿ, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕ ಅಶೋಕ್ ಎಂ. ಕೋಟ್ಯಾನ್ ಅವರ ಮೂಲಕ ಕಂಪನಿಯನ್ನು ಸಂಪರ್ಕಿಸಿ, ಔಷಧಿಯ ಪಾರ್ಸೆಲ್ ಫಲಾನುಭವಿಗಳಿಗೆ ತಲುಪುವಂತೆ ಮಾಡಿದ್ದಾರೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...