Wednesday, April 10, 2024

ಜು.9: ಕೋವಿಡ್-19 ನಿರ್ವಹಣೆ: ಸಾಮಾಜಿಕ ಕಾರ್ಯಕರ್ತರಿಗೆ ತರಬೇತಿ ಶಿಬಿರ

ವಿಟ್ಲ: ಕೊರೊನಾ ವೈರಾಣು ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮಾಜದಲ್ಲಿ ಆತಂಕ ಮನೆ ಮಾಡಿದೆ. ಈ ಸಂದರ್ಭದಲ್ಲಿ ಕೋವಿಡ್-19 ನಿರ್ವಹಣೆ ಕುರಿತಂತೆ ಸಮಾಜದಲ್ಲಿ ಜನಜಾಗೃತಿ ಮೂಡಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕಾಗಿದೆ. ವಿವಿಧ
ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕೆಲಸಗಳಲ್ಲಿ ಸಕ್ರಿಯರಾಗಿರುವ ಕಾರ್ಯಕರ್ತರಿಗೆ ಈ ಕುರಿತಂತೆ ತರಬೇತಿ ನೀಡುವ ಅಗತ್ಯವಿದ್ದು, ಈ ಹಿನ್ನೆಲೆ ವಿಟ್ಲ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಹಾಗೂ ಟೋಪ್ಕೋ ಜ್ಯುವೆಲ್ಲರಿ ವಿಟ್ಲ ಮತ್ತು ಪುತ್ತೂರು
ಸಹಯೋಗದೊಂದಿಗೆ ಕೋವಿಡ್-19 ನಿರ್ವಹಣೆ ಕುರಿತಂತೆ ಕಾರ್ಯಾಗಾರವನ್ನು ಜು.9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರ ವರೆಗೆ ನಡೆಯಲಿದೆ.

ಈ ಕಾರ್ಯಗಾರ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ದಿ ಕ್ಯಾಂಪಸ್ ಕೆರಿಯರ್ ಅಕಾಡೆಮಿಯ ಉಮರ್ ಯು.ಎಚ್. ಬರಲಿದ್ದಾರೆ. ಶಿಬಿರದಲ್ಲಿ ಜನಜಾಗೃತಿಯ ಅಗತ್ಯತೆ ಮತ್ತು ವಿಧಾನಗಳು, ಮುಂದಿನ ಸವಾಲುಗಳು, ‘ಒತ್ತಡ ನಿರ್ವಹಣೆ’ಯ ಕೌನ್ಸಿಲಿಂಗ್, ಸರಕಾರದ ಯೋಜನೆಗಳು ಹಾಗೂ ಕೊರೊನ ಸೋಂಕಿತರ ನಿರ್ವಹಣೆ ಮತ್ತು ಮೃತರ ಅಂತ್ಯಸಂಸ್ಕಾರ ಕುರಿತಂತೆ ಸಂಪನ್ಮೂಲ ವ್ಯಕ್ತಿಗಳಿಂದ, ವೈದ್ಯರಿಂದ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು.

ಕಾರ್ಯಾಗಾರದಲ್ಲಿ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ನೀಡಲಾಗುವುದು. ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಮೊದಲು ಹೆಸರು ನೋಂದಾಯಿಸುವ 30 ಮಂದಿಗೆ ಮಾತ್ರ ಅವಕಾಶ. ಆಸಕ್ತರು +91 90088 57506 ಅಥವಾ +91 9900802040 ಈ ಮೊಬೈಲ್ ನಂಬರ್‍ ಅನ್ನು ಸಂಪರ್ಕಿಸಬಹುದು.  ಹೆಸರು, ಊರು, ಮೊಬೈಲ್ ನಂಬರ್‍ ಅನ್ನು ನೋಂದಾಯಿಸಬಹುದು. ಎರಡು ತಾಸಿನ ಕಾರ್ಯಾಗಾರಕ್ಕೆ ಸಮಯಕ್ಕೆ 15 ನಿಮಿಷ ಮುಂಚಿತವಾಗಿ ಆಗಮಿಸಬೇಕು. ಸಮಯಾನುಸಾರ ಉಪಹಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.


More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...