Sunday, April 21, 2024

ಆಫ್ರಿಕನ್ ಬಸವನ ಹುಳು ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಹಲೇಜಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಬಸವನಹುಳು ಬಾಧೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಆಗಸ್ಟ್ 19 ರ ಬುಧವಾರದಂದು ಸುಭಾಷ್ ಕೆ. ಬಂಗೇರ ಹಲೇಜಿ ಅವರ ತೋಟದಲ್ಲಿ ಪ್ರಾತ್ಯಕ್ಷಿಕೆ ನಡೆಸಲು ತೀರ್ಮಾನಿಸಿದರು.

ಕೇವಲ ಮಾಹಿತಿ ನೀಡುವಲ್ಲಿಗೆ ಸೀಮಿತವಾಗದೆ ಇದರ ಸಾಧಕ ಬಾಧಕಗಳ ಕುರಿತು ಗಂಭೀರವಾಗಿ ಚರ್ಚೆ ನಡೆಸುವ ಮೂಲಕ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಗ್ರಾಮಕ್ಕೆ ತಟ್ಟಿದ ಬಾಧೆಯನ್ನು ನಿವಾರಿಸಬಲ್ಲರು ಎಂಬ ನಂಬಿಕೆಯೊಂದಿಗೆ ಆಗಸ್ಟ್ 19 ರ ಕಾರ್ಯಕ್ರಮ ಯಶಸ್ವಿಯಾಗುವಲ್ಲಿ ಕೃಷಿಕರೆಲ್ಲರೂ ಒಗ್ಗೂಡಬೇಕಿದೆ.

ಇಲಾಖಾ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಪ್ರಾತ್ಯಕ್ಷಿಕೆ ನಡೆಸಿ ಮಾಹಿತಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು.

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಹಿತ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಎ.19 ಮತ್ತು 20ರಂದು ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ...