Friday, April 5, 2024

ದಾರಿ ವಿಚಾರದಲ್ಲಿ ಕೊಲೆ ಬೆದರಿಕೆ; ಪೋಲೀಸ್ ಠಾಣೆಗೆ ದೂರು

ವಿಟ್ಲ: ಅಳಿಕೆ ಗ್ರಾಮದ ಎರುಂಬು ಎಂಬಲ್ಲಿ ದಾರಿ ವಿಚಾರದಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರು ಸೇರಿಕೊಂಡು ರಿವಾಲ್ವಾರ್ ನಲ್ಲಿ ಗುಂಡಿಕ್ಕಿ ಕೊಲೆ ನಡೆಸುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಳಿಕೆ ಗ್ರಾಮದ ಎರುಂಬು ಮೂಡಯಿಬೆಟ್ಟು ನಿವಾಸಿ ರಾಮಚಂದ್ರ ಬಲ್ಲಾಳ್ ದೂರು ನೀಡಿದವರು.

ಆರೋಪಿಗಳಾದ ಅಳಿಕೆ ಗ್ರಾಮದ ಎರುಂಬು ಮೂಡಯಿಬೆಟ್ಟು ನಿವಾಸಿಗಳಾದ ಉದನೇಶ್ವರ ಭಟ್‌, ಆದರ್ಶ್‌ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

ಸರ್ಕಾರಿ ಜಾಗದ ಮೂಲಕ ಮಣ್ಣು ರಸ್ತೆ ಹಾದು ಹೋಗುತ್ತಿದ್ದು. ಈ ರಸ್ತೆಯನ್ನು ರಾಮಚಂದ್ರ ಬಲ್ಲಾಳ್ ಅವರು ರಿಪೇರಿ ಮಾಡುತ್ತಿರುವಾಗ ಆರೋಪಿಗಳಾದ ಉದನೇಶ್ವರ ಭಟ್‌ ಮತ್ತು ಆದರ್ಶ್‌ ರವರು ಕಬ್ಬಿಣದ ರಾಡ್ ಮತ್ತು ಕತ್ತಿಯನ್ನು ಹಿಡಿದುಕೊಂಡು ಬಂದು ಪಿರ್ಯಾದಿದರರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು, ರಿವಾಲ್ವಾರ್ ತಂದು ನಿಮ್ಮನ್ನು ಗುಂಡಿಕ್ಕಿ ಕೊಲೆ ನಡೆಸುವುದಾಗಿ ಹೇಳಿ ಜೀವಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...