Saturday, April 6, 2024

ಅಯೋಧ್ಯೆಯ ರಾಮ ಮಂದಿರದ ಸಂಪೂರ್ಣ ರಚನೆಯ ನೀಲನಕ್ಷೆ ಬಿಡುಗಡೆ

ಅಯೋಧ್ಯೆ : ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನಾಳೆ ನಡೆಯಲಿದ್ದು, ಈ ನಡುವೆ ಸರ್ಕಾರ ದೇಗುಲದ ಹೊರ ರಚನೆಯ ನೀಲನಕ್ಷೆ ಬಿಡುಗಡೆ ಮಾಡಿದೆ.
ಈ ಚಿತ್ರದಲ್ಲಿ ಗೋಪುರಗಳು, ಕಂಬಗಳು ಮತ್ತು ಗುಮ್ಮಟಗಳನ್ನು ಒಳಗೊಂಡಿರುವ ಮೂರು ಅಂತಸ್ತು ಇರುವ ಭವ್ಯವಾದ ರಚನೆ ತೋರಿಸಲಾಗಿದೆ.


ಭೂ ವ್ಯಾಜ್ಯ ಪ್ರಕರಣದಲ್ಲಿ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ನಂತರ ದೇಗುಲದ ಮೂಲ ಯೋಜನೆಯನ್ನು ಬದಲಿಸಿ ಹೊಸ ಯೋಜನೆ ಸಿದ್ಧಪಡಿಸಲಾಗಿದೆ ಎಂದು ವರದಿಯಾಗಿದೆ.
‘ಈ ಮೊದಲು ಸುಮಾರು 141 ಅಡಿ ಎತ್ತರದ ರಾಮಮಂದಿರ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇತ್ತೀಚೆಗೆ ಇದನ್ನು 20 ಅಡಿ ಹೆಚ್ಚಳ ಮಾಡಿ 161 ಅಡಿ ಎತ್ತರದ ಮಂದಿರ ನಿರ್ಮಿಸಲಾಗುವುದು” ಎಂದು ದೇವಾಲಯದ ಮುಖ್ಯ ವಾಸ್ತುಶಿಲ್ಪಿ ಸಿ.ಸೊಂಪುರ ಅವರ ಪುತ್ರ ಹಾಗೂ ವಾಸ್ತುಶಿಲ್ಪಿ ನಿಖಿಲ್ ಸೊಂಪುರ ತಿಳಿಸಿದ್ದರು.


”ಹಾಗೆಯೇ ರಾಮಮಂದಿರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆ ಎತ್ತರವನ್ನು ಹೆಚ್ಚಿಸಲಾಗಿದೆ” ಎಂದು ತಿಳಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...