Sunday, April 7, 2024

ದೇಶದ ಪ್ರತಿಯೊಬ್ಬರೂ ಆರೋಗ್ಯದಿಂದ ಇರುವ ಉದ್ದೇಶದಿಂದ ಪ್ರಧಾನಿ ಆಯುಷ್ಮಾನ್ ಯೋಜನೆ ಜಾರಿಗೆ ತಂದಿದ್ದಾರೆ: ಉಪ ತಹಶೀಲ್ದಾರ್ ಶ್ರೀಧರ್

ಬಂಟ್ವಾಳ : ದೇಶದ ಪ್ರತಿಯೊಬ್ಬರೂ ಆರೋಗ್ಯದಿಂದ ಇರುವ ಉದ್ದೇಶದಿಂದ ಪ್ರಧಾನಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಎಲ್ಲರೂ ಇದರ ಪ್ರಯೋಜನ ಪಡೆಯಬೇಕಿದೆ ಎಂದು ಉಪ ತಹಶೀಲ್ದಾರ್ ಶ್ರೀಧರ್ ಹೇಳಿದರು.
ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ವತಿಯಿಂದ ಬಂಟ್ವಾಳದಲ್ಲಿರುವ ಯೋಜನೆಯ ಉನ್ನತಿ ಸೌಧದಲ್ಲಿ ನಡೆದ ಸೃಜನಶೀಲ ಕಾರ್ಯಕ್ರಮದಲ್ಲಿ ಸರಕಾರಿ ಸೌಲಭ್ಯಗಳ ಮಾಹಿತಿ, ಆಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.


ಆಯುಷ್ಮಾನ್ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ರತ್ನಾಕರ್, ಡಾ.ಅನಿರುದ್ಧ್ ಶೆಟ್ಟಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹರೀಶ್ ಮಾಂಬಾಡಿ, ಬಿ.ಸಿ.ರೋಡು ವಲಯಾಧ್ಯಕ್ಷ ಶೇಖರ್ ಸಾಮಾನಿ, ಬಂಟ್ವಾಳ ವಲಯಾಧ್ಯಕ್ಷ ವಸಂತ್ ಮೂಲ್ಯ ಉಪಸ್ಥಿತರಿದ್ದರು.
ಅಮ್ಟೂರು ಗ್ರಾಮದ ಫಲಾನುಭವಿಗೆ ವೈದ್ಯಕೀಯ ವೆಚ್ಚದ ಸಹಾಯಧನ ವಿತರಿಸಲಾಯಿತು. ಯೋಜನಾಧಿಕಾರಿ ಜಯಾನಂದ ಪಿ. ಪ್ರಸ್ತಾವಿಸಿದರು. ಬಂಟ್ವಾಳ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರ ಕುಟುಂಬಗಳಿಗೆ ಈ ಕಾರ್ಡ್ ಗಳನ್ನು ತಲುಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಮೇಲ್ವಿಚಾರಕ ಕೇಶವ ಕೆ. ಸ್ವಾಗತಿಸಿದರು. ಬಂಟ್ವಾಳ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸ್ವಪ್ನ ಆರ್.ಜೈನ್ ವಂದಿಸಿದರು. ಮೇಲ್ವಿಚಾರಕಿ ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...