Monday, April 8, 2024

ಆಗಸ್ಟ್ 31ರ ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಭಾರತದಿಂದ ಹೊರಹೋಗುವ ಹಾಗೂ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳನ್ನು ಆಗಸ್ಟ್ 31 ರ ರಾತ್ರಿ 11.59ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ. ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದ್ದು, ಅದಲ್ಲದೇ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ.

ಮಾ. 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಸದ್ಯಕ್ಕೆ ನಿರ್ಭಂಧಿಸಲಾಗಿದೆ.

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...