Friday, April 5, 2024

ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ: ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಲಾರಿಯೊಂದು ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದು,  ಸಂಚಾರಕ್ಕೆ ಅಡಚಣೆಯಾದ ಘಟನೆ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಸಂಜೆ ವೇಳೆ ನಡೆದಿದೆ.
ಮರದ ತುಂಡುಗಳನ್ನು ಹೇರಿಕೊಂಡು ಬಿಸಿರೋಡು ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಲಾರಿ ಮೆಲ್ಕಾರ್ ಸಮೀಪದ ಬೋಳಂಗಡಿ ತಿರುವಿಗೆ ಬರುತ್ತಿದ್ದಂತೆ ಲಾರಿ ಮಗುಚಿ ರಸ್ತೆಗೆ ಬಿದ್ದಿದೆ.
ಮರದ ಲಾರಿ ಬೀಳುವ ಸ್ಥಿತಿ ಯಲ್ಲಿ ವಾಲಿ ನಿಂತಿರುವ ವೇಳೆಯೇ ಇದನ್ನು ಪಕ್ಕಕ್ಕೆ ಸರಿಸಲು ಕ್ರೇನ್ ಸ್ಥಳಕ್ಕೆ ತರಿಸಲಾಗಿತ್ತು.

ಅದರೆ ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಲು ಮುಂದಾಗುತ್ತಿದ್ದಂತೆ ಲಾರಿ ಮಗುಚಿ ರಸ್ತೆಗೆ ಅಡ್ಡಲಾಗಿ ಬೀಳುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯಿಂದ ಕೆಲ ಹೊತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ.
ಹೆದ್ದಾರಿಯಲ್ಲಿ ಆಗಿರುವ ಘಟನೆಯಿಂದ ಟ್ರಾಫಿಕ್ ಸಮಸ್ಯೆಯನ್ನು ಸರಿ ಮಾಡಲು ಮೆಲ್ಕಾರ್ ಟ್ರಾಫಿಕ್ ಪೋಲೀಸರು ಮಳೆಯನ್ನು ಲೆಕ್ಕಿಸದೆ ಹರಸಾಹಸ ಪಡುತ್ತಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಎಸ್.ಐ.ಗಳಾದ ರಾಜೇಶ್ ಕೆ.ವಿ. ಹಾಗೂ ರಾಮನಾಯ್ಕ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...