Thursday, April 11, 2024

ತೆಂಗು ಬೆಳೆಯ ಸಮಗ್ರ ಅಭಿವೃದ್ದಿಗೆ ಸಹಾಯ ಧನ ಬಿಡುಗಡೆಗೆ ಆಗ್ರಹಿಸಿ ಸಿ.ಎಂ. ಗೆ ಮನವಿ

ಬಂಟ್ವಾಳ :  ತೆಂಗು ಬೆಳೆಯ ಸಮಗ್ರ ಅಭಿವೃದ್ದಿಗೆ ಪೂರಕ ಸಹಾಯ ಧನ, ತೆಂಗಿನ ಕಾಯಿ, ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ  ಒತ್ತಾಯಿಸಿ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ನಿಯಮಿತದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಗುತ್ತು ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇಂದು ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ನಿ. ಅಧ್ಯಕ್ಷ ರಾಜಾ ಬಂಟ್ವಾಳ್ ಅವರ ನೇತೃತ್ವದ ನಿಯೋಗ ಶಾಸಕರನ್ನು ಬಿ.ಸಿ.ರೋಡಿನಲ್ಲಿರುವ ಕಚೇರಿಯಲ್ಲಿ ಭೇಟಿಯಾಗಿ ಈ ಮನವಿ ಸಲ್ಲಿಸಿತು.

ಈ ಸಂದರ್ಭ ನಿಯಮಿತದ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ ಅಂತರ, ಶರಣಪ್ಪ ಉಮರಗಿ, ನಾರಾಯಣ ಪೂಜಾರಿ ದರ್ಖಾಸು, ವಿಠಲ ಸಪಲ್ಯ ಬಂಗುಲೆ, ಸದಾಶಿವ ಬಂಗುಲೆ, ನಾಗೇಶ್ ಕಲ್ಯಾರ್, ಅಂಬಿಕಾ ಹರೀಶ್,  ಮುಖ್ಯಾಕಾರ್ಯನಿರ್ವಹರ್ಣಾಕಾರಿ ಹರ್ಷಿತ್ ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...