Saturday, April 6, 2024

ಕಾನೂನು ವೇದಿಕೆಯಿಂದ ವನ ಮಹೋತ್ಸವ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆಯ ಬಂಟ್ವಾಳ ಘಟಕ ಹಾಗೂ ಪೆರಾಜೆ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಪೆರಾಜೆ ದ.ಕ. ಜಿ. ಪ. ಹಿ. ಪ್ರಾ. ಶಾಲಾ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ದ.ಕ. ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷ  ಎಸ್.ಪಿ. ಚಂಗಪ್ಪ ಅವರು ಗಿಡ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಶಾಲಾ ಮೈದಾನದಲ್ಲಿಯು ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು. ವೇದಿಕೆಯ ಉಪಾಧ್ಯಕ್ಷ ಉಮೇಶ್ ಕುಮಾರ್ ವೈ., ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರೇಂದ್ರ ಎಂ. ಸಿದ್ದಕಟ್ಟೆ, ಬಂಟ್ವಾಳ ಘಟಕದ ಅಧ್ಯಕ್ಷ ಸುರೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಮಾಜಿ ತಾ.ಪಂ. ಸದಸ್ಯರಾದ ಕುಶಲ ಎಂ. ಪೆರಾಜೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮೇಲ್ವಿಚಾರಕಿ ಶ್ವೇತಾ, ಯುವಕ ಮಂಡಲದ ಅಧ್ಯಕ್ಷ ದೀಪಕ್ ಪೆರಾಜೆ ವೇದಿಕೆಯಲ್ಲಿದ್ದರು.

ಬಂಟ್ವಾಳ ವಕೀಲರ ಸಂಘದ ಸದಸ್ಯರಾದ ಸತೀಶ್ ಬಿ., ಉಮಾಕರ ಬಂಗೇರ ಹಾಗೂ ಯುವಕ ಮಂಡಲ ಪೆರಾಜೆಯ ಸದಸ್ಯರು ಉಪಸ್ಥಿತರಿದ್ದರು. ಸಚಿನ್ ಎಂ. ಪೆರಾಜೆ ಸ್ವಾಗತಿಸಿದರು. ಪ್ರಶಾಂತ್ ಮಂಜೋಡಿ ವಂದಿಸಿದರು. ಲಕ್ಷ್ಮೀಶ ಪೆರಾಜೆ  ಕಾರ್ಯಕ್ರಮ ನಿರೂಪಿಸಿದರು.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...