Saturday, April 6, 2024

ಬಂಟ್ವಾಳ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ

ಬಂಟ್ವಾಳ:  ದ.ಕ ಜಿಲ್ಲಾ ಕಟ್ಟಡ ಮತ್ತು ಕೋರೆ ಕಾರ್ಮಿಕ ಸಂಘ ( ಎಐಟಿಯುಸಿ ) ಬಂಟ್ವಾಳ ತಾಲೂಕು ಘಟಕ ಹಾಗೂ ಕಾರ್ಮಿಕ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ ಇತ್ತೀಚಿಗೆ ಬಂಟ್ವಾಳ ಬೈಪಾಸ್ ರಸ್ತೆ ಕಾಮ್ರೆಡ್ ಶಾಂತರಾಮ್ ಪೈ ಸ್ಮಾರಕ ಭವನದಲ್ಲಿ ಕಟ್ಟಡ ಕಾರ್ಮಿಕರಿಗೆ ಕೊರೋನಾ ವೈರಸ್ ತಡೆಗಟ್ಟುವ ಬಗ್ಗೆ ಮಾಹಿತಿ ಅಭಿಯಾನದ ಅಂಗವಾಗಿ ಆರೋಗ್ಯ ಕಿಟ್ ವಿತರಣಾ ಕಾರ್‍ಯಕ್ರಮವು ದ.ಕ ಜಿಲ್ಲಾ ಕಟ್ಟಡ ಮತ್ತು ಕೋರೆ ಕಾರ್ಮಿಕ ಸಂಘದ ಪ್ರಧಾನ ಕಾರ್‍ಯದರ್ಶಿ ಎಂ.ಕರುಣಾಕರ್ ಮಾರಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಆರೋಗ್ಯ ಮಾಹಿತಿ ಅಭಿಯಾನ ಕಾರ್‍ಯಕ್ರಮವನ್ನು ಉದ್ಘಾಟಿಸಿ ಕಾರ್ಮಿಕ ಇಲಾಖೆ ಮಂಗಳೂರು 1ನೇ ವಿಭಾಗದ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ ಎಲಿಜಬೆತ್ ಮಾತನಾಡುತ್ತ ಕೊರೋನಾ ವೈರಸ್ ಹರಡುವ ಬಗ್ಗೆ ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಮತ್ತು ಪರಿಸರದಲ್ಲಿ ವಹಿಸಬೇಕಾದ ಎಚ್ಚರಿಕೆ ಮತ್ತು ಮುಂಜಾಗ್ರತೆ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ವೃತ್ತ ಕಾರ್ಮಿಕ ನಿರೀಕ್ಷಕರಾದ ಮೆರ್ಲಿನ್ ಗ್ರೆಸೀಯಾ ಡಿಸೋಜಾ ರವರು ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ, ಕಟ್ಟಡ ಕಾರ್ಮಿಕರ ಹೊಸ ನೋಂದಣಿ, ರೀನಿವಲ್ ಮತು ಸರಕಾರ ಘೋಷಿಸಿರುವ ಪರಿಹಾರ ಧನ ಮತ್ತು ಕ್ಲೈಮ್ ಅರ್ಜಿಗಳ ವಿಲೆವಾರಿ ಮುಂತಾದ ಕಛೇರಿ ಕೆಲಸಗಳ ಒತ್ತಡದಿಂದಾಗಿ ಮಂಜೂರಾತಿ ಕೆಲಸ ವಿಳಂಬವಾಗಿರುವುದಕ್ಕೆ ಕಾರ್ಮಿಕರು ಸಹಕರಿಸಬೇಕಾಗಿ ಮನವಿ ಮಾಡಿದರು.

ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್‍ಯದರ್ಶಿ ಎಂ. ಕರುಣಾಕರ್ ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣ ಸವಲತ್ತುಗಳನ್ನು ಪಡೆಯಲು ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ತೊಡಗಿಕೊಂಡಿರುವ ಕೆಲಸಗಾರರು ಮಂಡಳಿಯ ಸದಸ್ಯರಾಗಿ ಸೌಲಭ್ಯವನ್ನು ಪಡೆಯಲು ಹೆಚ್ಚು ಹೆಚ್ಚು ಸಂಘಟಿತರಾಗಿ ಮುಂದುವರಿಯಲು ಕರೆ ನೀಡಿದರು.

ಪ್ರಾರಂಭದಲ್ಲಿ ಸಂಘದ ಕಾರ್‍ಯದರ್ಶಿಗಳಾದ ಬಿ.ಶೇಖರ್ ಇವರು ಪ್ರಸ್ತಾವಿಕವಾಗಿ ಮಾತನಾಡಿ ಕಟ್ಟಡ ಕಾರ್ಮಿಕರು ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಲು ಹೆಚ್ಚು ತಿಳುವಳಿಕೆಯನ್ನು ಪಡೆದುಕೊಂಡು ಸಕ್ರೀಯವಾಗಿ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಿ ಸರಕಾರಿ ಕಾನೂನು ಸವಲತ್ತುಗಳನ್ನು ಪಡೆಯಲು ಸಮಗ್ರ ಮಾಹಿತಿಯ ಅಗತ್ಯವಿದೆಯೆಂದು ಹೇಳಿದರು.

ಎಐಟಿಯುಸಿ ನಾಯಕರಾದ ಸುರೇಶ್ ಕುಮಾರ್ ಅವರು ಅತಿಥಿಯಾಗಿ ಭಾಗವಹಿಸಿದ್ದರು. ಸಂಘದ ಸಹ ಕಾರ್‍ಯದರ್ಶಿ ಹರ್ಷಿತ್ ಪೂಜಾರಿ, ಉಪಾಧ್ಯಕ್ಷ ಬಾಲಕೃಷ್ಣ ಮದ್ವ ಉಪಸ್ಥಿತರಿದ್ದರು.

ಸಂಘದ ಕಛೇರಿ ಕಾರ್‍ಯದರ್ಶಿ ಕುಮಾರಿ ಕೇಶವತಿ ಸ್ವಾಗತಿಸಿ, ಸುರೇಶ್ ಕುಮಾರ್ ವಂದಿಸಿದರು. ಕಾರ್‍ಯಕ್ರಮದ ಕೊನೆಯಲ್ಲಿ ಅತಿಥಿಗಳಿಂದ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಕಿಟ್ ವಿತರಿಸಲಾಯಿತು.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....