Tuesday, April 9, 2024

ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಖಂಡಿಸಿ ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಬೆಂಗಳೂರಿನಲ್ಲಿ ನಡೆದ ಗಲಭೆ ಖಂಡಿಸಿ, ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರತಿಭಟನೆ ನಡೆಸಿ, ಬಳಿಕ ಬಂಟ್ವಾಳ ತಹಶೀಲ್ದಾರರಿಗೆ ಮನವಿ ಪತ್ರ ನೀಡಿದ್ದಾರೆ.
ಬೆಂಗಳೂರಿನ ಕೆ.ಜೆ. ಹಳ್ಳಿ ಹಾಗೂ ಡಿ.ಜೆ. ಹಳ್ಳಿಯಲ್ಲಿ ನಡೆದ ಸಾರ್ವಜನಿಕ ಆಸ್ತಿ-ಪಾಸ್ತಿಗಳ ಹಾನಿ, ಅಮಾಯಕರಿಗೆ ತೊಂದರೆ, ಠಾಣೆಗೆ ಮುತ್ತಿಗೆ ಹಾಕಿ ದ್ವಂಸಕ್ಕೆ ಯತ್ನಿಸಿದ ಕೃತ್ಯಗಳು ನಡೆದಿವೆ.
ಈ ಘಟನೆಯ ಪ್ರಮುಖ ರೂವಾರಿ ಎಂದು ಬಿಂಬಿಸಲಾಗುವ ಸ್ಥಳೀಯ ಕಾರ್ಪೊರೇಟರ್‍ ಮುಝಾಯಿಲ್ ಪಾಶಾ ಮತ್ತು ಕೃತ್ಯದಲ್ಲಿ ಭಾಗವಹಿಸಿದ ಇತರರನ್ನು ಬಂಧಿಸಿ ಶಿಕ್ಷಿಸುವಂತೆ ಮನವಿ ಪತ್ರದಲ್ಲಿ ತಿಳಿಸಿದೆ.


ಗಲಭೆಯಿಂದ ಸಂತ್ರಸ್ಥರಾಗಿರುವ ಅಮಾಯಕ ಹಿಂದೂಗಳಿಗೆ ಪರಿಹಾರ ನೀಡಬೇಕು, ಇನ್ನು ಮುಂದೆ ಇಂತಹ ಕೃತ್ಯಗಳು ಆಗದಂತೆ ಸರ್ಕಾರ ಎಚ್ಚರವಹಿಸಬೇಕು. ಕರ್ತವ್ಯನಿರತ ಪೊಲೀಸರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಲಾಗಿದೆ.


ಈ ಸಂದರ್ಭದಲ್ಲಿ ಅಶೋಕ್ ಶೆಟ್ಟಿ ಸರಪಾಡಿ, ಜಿಲ್ಲಾ ಗೋ ರಕ್ಷಕ ಪ್ರಮುಖ, ವಿ.ಹಿ.ಪ. ಭಾರತ್ ಕುಂಡೇಲು, ಜಿಲ್ಲಾ ಸಹ ಸಂಯೋಜಕ ಬಜರಂಗದಳ ಗುರುರಾಜ್ ಬಂಟ್ವಾಳ, ಜಿಲ್ಲಾ ಸಹ ಸಂಯೋಜಕ ಬಜರಂಗದಳ ಶಿವಪ್ರಸಾದ್ ತುಂಬೆ, ಸಂಯೋಜಕ ಬಜರಂಗದಳ ಬಂಟ್ವಾಳ ಸುರೇಶ್ ಬೆಂಜನಪದವು, ವಿ.ಹಿ.ಪ ಕಾರ್ಯದರ್ಶಿ ಅಭಿ ರೈ, ಸಂತೋಶ್ ಸರಪಾಡಿ, ಭುವಿತ್ ಶೆಟ್ಟಿ, ದೀಪಕ್ ಬಂಟ್ವಾಳ, ಪ್ರಸಾದ್ ಬೆಂಜನಪದವು, ಅಶ್ವಥ್ ಪೂಂಜಾಲಕಟ್ಟೆ ಹಾಗೂ ಇತರರು ಭಾಗವಸಿದ್ದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...