Saturday, April 6, 2024

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸು ಜನ್ಮದಿನಾಚರಣೆ

ಬಂಟ್ವಾಳ:  ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯ ಮಂತ್ರಿ ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಯವರು ದೀಪ ಬೆಳಗಿಸುವ ಮುಖಾಂತರ ಹಾಗೂ ಅವರ ಭಾವಚಿತ್ರಕ್ಕೆ ಪುಷ್ಪ ಹಾರ ಹಾಕಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ರಾಜೀವ್ ಗಾಂಧಿಯವರು ನಮ್ಮ ದೇಶದ ಯುವ ಜನಾಂಗಕ್ಕೆ ವಿಶೇಷ ಸ್ಥಾನಮಾನ ನೀಡಿ ಜಗತ್ತಿನ ಎಲ್ಲಾ ದೇಶಗಳಿಗೆ ಸರಿಸಮಾನವಾಗಿ ಪೈಪೋಟಿ ನೀಡಲು ಶಕ್ತಿ ತುಂಬಿದ್ದರು ಎಂದರು. ಅದೇ ರೀತಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಉಳುವವನೇ ಹೊಲದೊಡೆಯ ಎಂಬ ಮಾತಿನಂತೆ ಭೂಸುಧಾರಣಾ ಕಾನೂನನ್ನು ರಾಜ್ಯದಲ್ಲಿ ಜಾರಿ ಮಾಡಿ ಬಡವರ ಪಾಲಿಗೆ ದೇವ ಮಾನವನಂತಾಗಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಸ್ತಾವನೆ ಗೈದರು. ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಅಕ್ರಮ ಸಕ್ರಮ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ರವಿ ಪೂಜಾರಿ ಪಂಜೀಕಲ್ಲು, ಸುರೇಶ್ ಪೂಜಾರಿ ಜೊರ, ಪುರಸಭಾ ಸದಸ್ಯ ಗಂಗಾಧರ್ ಪೂಜಾರಿ, ಜಗನ್ನಾಥ ತುಂಬೆ,ಸುವರ್ಣ ಕುಮಾರ್ ಜೈನ್,ಗಂಗಯ್ಯ ಡಿ ಎನ್ ಇರ್ವತೂರು,ವಿನ್ಸೆಂಟ್ ಪಿಂಟೋ ಸರಪಾಡಿ,ವೆಂಕಪ್ಪ ಪೂಜಾರಿ,ಫಾರೂಖ್ ನಾವೂರು, ಅಮ್ಮು ಅರಬಿಗುದ್ದೆ,ಪುಷ್ಪರಾಜ್ ನಾವೂರು,ಸಂತೋಷ್ ಪೂಜಾರಿ ಪಂಜಿಕಲ್ಲು, ಏ ಜೆ ಮೊರಸ್ ಅಲ್ಲಿಪಾದೆ,ಪದ್ಮನಾಭ ಸಾವಂತ್, ಪೂವಪ್ಪ ಪೂಜಾರಿ ಮಹಾಬಲ ಬಂಗೇರ ಸ್ವಾಗತಿಸಿ ರಮೇಶ್ ನಾಯಕ್ ರಾಯಿ ವಂದಿಸಿದರು.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...