Saturday, April 20, 2024

ಕಾರ್ಯನಿರತ ಪತ್ರಕರ್ತರ ಸಂಘದಿಂದ ಬಂಟ್ವಾಳದಲ್ಲಿ ಗುರುತು ಚೀಟಿ ವಿತರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರಿಗೆ ನೀಡುವ ಗುರುತು ಚೀಟಿಯನ್ನು ಬಂಟ್ವಾಳ ತಾಲೂಕಿನ ಸದಸ್ಯರಿಗೆ ಇಂದು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯನಿರತ ಪತ್ರಕರ್ತರಲ್ಲಿ ಗ್ರಾಮೀಣ ಭಾಗದಲ್ಲಿ ದುಡಿಯುವವರು ಕೋವಿಡ್ ಬಳಿಕ ಸಮಸ್ಯೆ ಅನುಭವಿಸುತ್ತಿದ್ದು, ಈಗಾಗಲೇ ರಾಜ್ಯಾಧ್ಯಕ್ಷರು ಪರಿಹಾರ ಧನ ನೀಡುವ ಕುರಿತು ಮುಖ್ಯಮಂತ್ರಿ ಬಳಿ ಮಾತನಾಡಿದ್ದಾರೆ. ಸಂಘದ ಸದಸ್ಯರಲ್ಲನೇಕರು ಆರೋಗ್ಯ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದು, ಆಸ್ಪತ್ರೆಗಳ ಹೆಲ್ತ್ ಕಾರ್ಡ್ ನೀಡುವ ಕುರಿತು ಕಾರ್ಯಪ್ರವೃತ್ತರಾಗಿರುವುದಾಗಿ ಅವರು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಶುಭ ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ವೇಳೆ ಬಂಟ್ವಾಳ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ  ಸಂಘದ ಕಾರ್ಯದರ್ಶಿ ಮಹಮ್ಮದ್ ಆಲಿ ವಿಟ್ಲ ವಂದಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಸಂಘದ ಸದಸ್ಯರಿಗೆ ಗುರುತುಚೀಟಿ, ಕ್ಷೇಮ ಹೆಲ್ತ್ ಕಾರ್ಡ್ ವಿತರಿಸಲಾಯಿತು. ಇದೇ ವೇಳೆ ಬೆಂಗಳೂರಿನಲ್ಲಿ ನಡೆದ ಪತ್ರಕರ್ತರ ಮೇಲಿನ ಹಲ್ಲೆಯನ್ನು ಖಂಡಿಸಲಾಯಿತು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...