Friday, April 5, 2024

ಕೊರೊನಾ ನಿರ್ವಹಣೆಯಲ್ಲಿ ಸರಕಾರದ ವೈಫಲ್ಯ: ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನೆ

ಬಂಟ್ವಾಳ: ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಆಶ್ರಯದಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರಗಳ ವೈಫಲ್ಯತೆ ವಿರುದ್ಧ ಜನಜಾಗೃತಿ ಅಭಿಯಾನ ಬಿಸಿರೋಡು ಮಿನಿ ವಿಧಾನ ಸೌಧದ ಕಚೇರಿ ಆವರಣದಲ್ಲಿ ನಡೆಯಿತು.
ಸರಕಾರವೂ ಲಾಕ್ ಡೌನ್ ಕ್ರಮವನ್ನು ಅನುಸರಿಸಿದ್ದರೂ, ಕೊರೊನಾ ನಿಯಂತ್ರಣ ಸಾಧ್ಯವಾಗದಿದ್ದು, ಸರಕಾರ ದ್ವಂದ್ವ ನಿಲುವುಗಳು ದೇಶದ ಜನಸಾಮಾನ್ಯರ, ಕಾರ್ಮಿಕರ, ಬಡ ಜನರ ಜೀವನವನ್ನು ಶೋಚನೀಯ ಪರಿಸ್ಥಿತಿಗೆ ತಂದಿದೆ. ಖಾಸಗಿ ಆಸ್ಪತ್ರೆಗಳು ಕೊರೊನಾ ಹೆಸರಿನಲ್ಲಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.


ಕೋಟ…… ತೆಗಳಿಕೆ – ಹೊಗಳಿಕೆ: 

ಪ್ರತಿಭಟನೆ ವೇಳೆ ಮೊದಲು ಭಾಷಣ ಮಾಡಿದ ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ ಅವರು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಸಿಗದೆ ಇರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ತೆಗಳಿದರು.
ಅವರ ಬಳಿಕ ಮಾತು ಆರಂಭಿಸಿದ ಪುರಸಭಾ ಮಾಜಿ ನಾಮ ನಿರ್ದೇಶನ ಸದಸ್ಯ ಲೋಕೇಶ್ ಸುವರ್ಣ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉತ್ತಮ ವ್ಯಕ್ತಿ ಆದರೆ ಜನ ಸಾಮಾನ್ಯರು ಓಟು ಹಾಕಿದ ಜನಪ್ರತಿನಿಧಿಗಳು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಪ್ರತಿಭಟನೆಯ ಬಳಿಕ ಈ ದ್ವಂದ್ವ ಹೇಳಿಕೆಗಳು ಚರ್ಚೆಗೆ ಕಾರಣವಾಯಿತು.

ಪ್ರತಿಭಟನೆಯಲ್ಲಿ ಸದಾಶಿವ ಬಂಗೇರ, ಪ್ರಭಾಕರ ದೈವಗುಡ್ಡೆ, ಪ್ರಧಾನ ಕಾರ್ಯದರ್ಶಿ ಬಿ.ಶೇಖರ್‍, ಸುರೇಶ್ ಕುಮಾರ್‍, ಪ್ರಭಾರ ವಕೀಲರಾದ ಚಂದ್ರಶೇಖರ್ ಪೂಜಾರಿ, ರಾಮಣ್ಣ ವಿಟ್ಲ, ಲೋಕೇಶ ಸುವರ್ಣ, ಪ್ರಕಾಶ್ ಶೆಟ್ಟಿ ತುಂಬೆ, ಪುರಸಬಾ ಸದಸ್ಯ ಲೋಲಾಕ್ಷ ಶೆಟ್ಟಿ, ಮಾಜಿ ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಹಾರುನ್ ರಶೀದ್, ಸುರೇಂದ್ರ ಕೋಟ್ಯಾನ್, ಬಾಬು ಭಂಡಾರಿ, ಸರಪಾಡಿ ಪಂಚಾಯತ್ ಸದಸ್ಯ ಲೋಕೇಶ ಪೂಜಾರಿ, ಇಸ್ಮಾಯಿಲ್ ಕೆಳಗಿನ ಪೇಟೆ, ಶರೀಫ್ ಮಧ್ವ, ಸರಸ್ವತಿ ಕಡೆಶೀವಾಲಯ, ಪ್ರೇಮನಾಥ ಕೆ. ಶ್ರಿಶೈಲ ಮತ್ತಿರರು ಉಪಸ್ಥಿತರಿದ್ದರು.

 

 

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...