Wednesday, April 10, 2024

ವಾಹನ ಸವಾರರೇ.. ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಬೀಳುತ್ತೆ ದಂಡ..!

ಬಂಟ್ವಾಳ: ವಾಹನ ಸವಾರರೇ ಇನ್ನು ಮುಂದೆ ಹೆಲ್ಮೆಟ್ ಧರಿಸದೆ ಹೋದರೆ ಬೀಳುತ್ತೆ ದಂಡ!
ಸೀಟ್ ಬೆಲ್ಟ್ , ತ್ರಿಬಲ್ ರೈಡ್ ಸಹಿತ ದಾಖಲೆ ಪತ್ರಗಳ ತಪಾಸಣೆ ಕಾರ್ಯಯನ್ನು ಪೋಲೀಸ್ ಇಲಾಖೆ ಚುರುಕುಗೊಳಿಸಿದೆ.

ಕೋವಿಡ್-19 ಮಹಾಮಾರಿ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಎಂಬ ಕಾರಣಕ್ಕಾಗಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ವಾಹನ ಸವಾರರು ವಾಹನ ಚಲಾಯಿಸುವ ಕ್ರಮಕ್ಕೆ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸುವುದನ್ನು ನಿಲ್ಲಿಸಲು ಸ್ವಲ್ಪ ದಿನ ವಾಹನಗಳನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ದಂಡ ವಸೂಲಿ ಮಾಡಿ ಬಿಡುಗಡೆ ಮಾಡುತ್ತಿದ್ದರು.


ಆದರೆ ಆ ಬಳಿಕ ವಾಹನ ತಪಾಸಣೆ ಕಾರ್ಯ ಸ್ಥಗಿತಗೊಂಡಿತ್ತು.
ಅನ್ ಲಾಕ್ 3.0 ದ ಬಳಿಕ ಮತ್ತೆ ಟ್ರಾಫಿಕ್ ಪೋಲೀಸರು ಕಾರ್ಯಪ್ರವೃತ್ತರಾಗಿದ್ದು, ವಾಹನಗಳ ತಪಾಸಣೆ ಜೊತೆ ಕಾನೂನು ಮೀರಿ ವಾಹನ ಚಲಾಯಿಸುವ ಸವಾರರಿಗೆ ದಂಡ ಹಾಕಲಾಗುತ್ತಿದೆ.
ಕೋವಿಡ್ -19 ನೆಪದಲ್ಲಿ ವಾಹನ ಸವಾರರು ಕಾನೂನು ಉಲ್ಲಂಘಿಸಿ ಸಂಚಾರ ಮಾಡುವುದು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆ ರಸ್ತೆ ಸಂಚಾರ ನಿಯಮ ಪಾಲಿಸಲು ಕ್ರಮ ಕೈಗೊಂಡಿದ್ದಾರೆ.
ಬಂಟ್ವಾಳ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ. ನೇತೃತ್ವದಲ್ಲಿ  ಟ್ರಾಫಿಕ್ ಕಂಟ್ರೋಲ್ ಜೊತೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡದ ಬಿಸಿ ಮುಟ್ಟಿಸುತ್ತಿದ್ದಾರೆ.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...