Friday, April 12, 2024

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಜನ್ಮ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ  (ನಗರ-ಗ್ರಾಮೀಣ) ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ದಮನಿತ ಸಮುದಾಯಗಳಿಗೆ ಶಕ್ತಿ ತುಂಬಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ ಜನ್ಮದಿನಾಚರಣೆ ಕಾರ್ಯಕ್ರಮ ಶ್ರೀ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಬೆಳ್ತಂಗಡಿ ತಹಶೀಲ್ದಾರ್ ರವರ ಮುಖಾಂತರ ಮನವಿ ಸಲ್ಲಿಸಲಾಯಿತು.

 

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಗಂಗಾಧರ ಗೌಡ, ಹಾಲಿ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್,  ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಜಿ. ಗೌಡ, ಚುನಾಯಿತ ಗ್ರಾಮ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು, ಸಂಚಾಲಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...