Friday, April 12, 2024

ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ

ಬೆಳ್ತಂಗಡಿ: ಇಲ್ಲಿನ ಜೂನಿಯರ್ ಕಾಲೇಜು ಗ್ರೌಂಡ್ ನ ರಸ್ತೆಯಲ್ಲಿ ಕೊಲೆ ಯತ್ನ ನಡೆದಿದೆ. ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂದು ವರದಿಯಾಗಿದೆ.

ವೃತ್ತಿಯಲ್ಲಿ ಕಾರು ಚಾಲಕರಾಗಿರುವ ವಾಸು ಎಂಬುವವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ. ಇಂದು ಬೆಳಿಗ್ಗೆ ವಾಕಿಂಗ್ ಮಾಡುತಿದ್ದ ವಾಸು ಅವರನ್ನು ತಲವಾರಿನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದ್ದು, ವಾಸು ಅವರ ಮಗನ ಮೇಲೆಯೇ ಅನುಮಾನವಿದೆ.

ಅಪ್ಪ- ಮಗನ ಮದ್ಯೆ ಮನಸ್ಥಾಪವಿದ್ದು, ಬೆಳಿಗ್ಗೆ ಮಗ ಮನೆಯಿಂದ ಹೊರಗೆ ಬಂದಿದ್ದ ಎನ್ನಲಾಗಿದ್ದು, ಈ ಘಟನೆಯ ಬಳಿಕ ಮಗನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಅಗಿದ್ದು, ಅನುಮಾನ ಮತ್ತಷ್ಟು ಹೆಚ್ಚಾಗಿದೆ. ಗಾಯಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಠಾಣಾ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತಿದ್ದಾರೆ. ಮಗನ ಮೇಲೆ ಅನುಮಾನವಿದ್ದರೂ, ಪೋಲಿಸರ ತನಿಖೆಯ ನಂತರ ಸತ್ಯಾಸತ್ಯತೆ ತಿಳಿದು ಬರಬೇಕಿದೆ.

More from the blog

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...