Tuesday, October 31, 2023

ಸಿ.ಎಂ. ಗೃಹ ಕಚೇರಿ `ಕೃಷ್ಣಾ’ದ 11 ಮಂದಿ ಸಿಬ್ಬಂದಿಗಳಿಗೂ ಕೊರೊನಾ ಸೋಂಕು..?

Must read

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ದೃಢವಾದ ಬೆನ್ನಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾದ 11 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ಸಿ.ಎಂ. ಬಿ.ಎಸ್. ಬಿ.ಎಸ್.ವೈ. ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು, ಆ ನಂತರ ಸಿ.ಎಂ. ಮಗಳಿಗೂ ಕೊರೊನಾ ಇರುವುದು ದೃಢಪಟ್ಟಿದೆ. ಈದೀಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿಯೂ ಹಲವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

More articles

Latest article