Wednesday, April 10, 2024

ಕರಾವಳಿಯಲ್ಲಿ ಮೂರ್ತೆದಾರಿಕೆಗೆ ಅನುಮತಿ ನೀಡಲು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಸೂಚನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮೂರ್ತೆದಾರಿಕೆ ಮಾಡಲು ಪರವಾನಿಗೆ ಕೋರಿ ಬಂದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೂರ್ತೆದಾರರ ಸಮಸ್ಯೆಗಳ ಬಗ್ಗೆ ಮೂರ್ತೆದಾರರ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಮೂರ್ತೆದಾರರಿಗೆ ಪರವಾನಿಗೆ ಪ್ರಕ್ರಿಯೆ ಸರಳೀಕರಿಸಲು ರಾಜ್ಯ ಸರಕಾರ ಈ ಹಿಂದೆಯೇ ಪರವಾನಿಗೆ ಅಧಿಕಾರವನ್ನು ಅಬಕಾರಿ ಇಲಾಖೆಯಿಂದ ಕಂದಾಯ ಇಲಾಖೆಗೆ ಹಸ್ತಾಂತರಿಸಿದೆ. ಆದರೆ ಪರವಾನಿಗೆ ಶುಲ್ಕ ಪಾವತಿ ಬಗ್ಗೆ ಇಲಾಖೆಗಳ ನಡುವೆ ಗೊಂದಲ ಇದ್ದುದರಿಂದ ಪರವಾನಿಗೆ ನೀಡುವಾಗ ವಿಳಂಬವಾಗುತ್ತಿತ್ತು. ಈ ಬಗ್ಗೆ ಎರಡೂ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅರ್ಜಿಗಳನ್ನು ನಿಯಮಾನುಸಾರ ಸರಕಾರಿ ಅಥವಾ ಖಾಸಗಿ ಜಾಗದಲ್ಲಿದೆಯಾ, ಅಂಗಡಿ ಪರಿವರ್ತಿತ ಜಾಗದಲ್ಲಿದೆಯಾ, ಸ್ಥಳೀಯ ಸಂಸ್ಥೆ ಪರವಾನಿಗೆ ಪಡೆದಿದೆಯಾ ಮತ್ತಿತರ ಅಂಶಗಳನ್ನು ಪರಿಶೀಲಿಸಿ ಪರವಾನಿಗೆ ನೀಡುವಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚಿಸಿದರು. ಪರವಾನಿಗೆ ಪ್ರಕ್ರಿಯೆಯನ್ನು ಸಕಾಲ ಅಡಿಯಲ್ಲಿ ನೀಡಲು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿಗಳು ನುಡಿದರು. ಪರವಾನಿಗೆ ನಂತರ ಅಬಕಾರಿ ಇಲಾಖೆಯವರು ಮಾರಾಟ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಮೂರ್ತೆದಾರಿಕೆ ಪರವಾನಿಗೆಯನ್ನು 5 ವರ್ಷಗಳಿಗೆ ವಿಸ್ತರಿಸುವ ಬೇಡಿಕೆ ಸಂಬಂಧ ಪರಿಶೀಲಿಸಿ, ಅಗತ್ಯಬಿದ್ದರೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ತಿಳಿಸಿದ ಡಾ. ಕೆ.ವಿ. ರಾಜೇಂದ್ರ, ಮೂರ್ತೆದಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರೇ ಇರುವುದರಿಂದ, ಇವರಿಗೆ ಇತರೆ ನೆರವು ನೀಡಲು ಪರಿಶೀಲಿಸಲಾಗುವುದು ಎಂದು ಹೇಳಿದರು.
ಅಬಕಾರಿ ಉಪ ಆಯುಕ್ತೆ ಶೈಲಜಾ ಕೋಟೆ, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಬಂಟ್ವಾಳ ತಹಶೀಲ್ದಾರ್ ರಶ್ಮಿ, ಮೂರ್ತೆದಾರರ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...